ನಾಳೆ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾವಳಿ ಆಯೋಜನೆ
ಸಾಗರ : ಜೈ ಭಾರತ್ ಗೆಳೆಯರ ಬಳಗದ ವತಿಯಿಂದ ದ್ವಿತೀಯ ವರ್ಷದ ರಾಜ್ಯಮಟ್ಟದ ಓಪನ್ ಕಬಡ್ಡಿ ಪಂದ್ಯಾವಳಿ ಜ.15ರಂದು ಸ್ಥಳೀಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ವಿವಿಧ ಭಾಗಗಳಿಂದ, ಕ್ರೀಡಾಪಟುಗಳು ಆಗಮಿಸಲಿದ್ದಾರೆ ಎಂದು ಬಳಗ ಅಧ್ಯಕ್ಷ ಶರಣ್ ತಿಳಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ.
ಪಂದ್ಯಾವಳಿ ಅಂಗವಾಗಿ ಪದವಿಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ ಅವಕಾಶಗಳು ಹಾಗೂ ಪರೀಕ್ಷಾ ಪೂರ್ವ ತಯಾರಿಯ ಬಗ್ಗೆ ಬೆಂಗಳೂರಿನತೀರ್ಥಹಳ್ಳಿಮಲ್ನಾಡ್ ಕೋಚಿಂಗ್ ಸೆಂಟರ್ಕೇಶವಮೂರ್ತಿ ಅವರಿಂದ ಒಂದು ದಿನದ ಕಾರ್ಯಗಾರ ನಡೆಯಲಿದೆ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಆಗಮಿಸಲಿದ್ದಾರೆ. ಇಸ್ರೋ ವಿಜ್ಞಾನಿಗಳಾದ ಕೆ.ಎಲ್. ಶಿವಾನಿ, ಎ.ಎಸ್. ಭೀಮರಾಜ್ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಾಗಾರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ 94820- 30881 / 95919-40685 2 ಸಂಪರ್ಕಿಸಲು ಕೋರಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply