ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಟಿ ಡಿ ಮೇಘರಾಜ್ ಪುನರ್ ಆಯ್ಕೆ !
ಶಿವಮೊಗ್ಗ : ಬಿ ವೈ ವಿಜಯೇಂದ್ರ ಬಿಜೆಪಿಯ.ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಮೇಲೆ ಬಿಜೆಪಿಯಲ್ಲಿ ಎಲ್ಲಾ ಪದಾಧಿಕಾರಿಗಳ ಬದಲಾವಣೆ ಆಗಲಿದೆ ಎಂಬ ಸುದ್ದಿ ಎಲ್ಲೆಡೆ ಹರಡಿತ್ತು. ಅದರಂತೆ ನಿನ್ನೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ 39 ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳ ಪಟ್ಟಿಯನ್ನು ಘೋಷಿಸಿದ್ದಾರೆ.
ಹಾಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ ಡಿ ಮೇಘರಾಜ್ ಅವರ ಅವಧಿ ಐದು ವರ್ಷಗಳು ಮುಗಿದಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಯಾವಾಗ ಎಂಬ ಕುತೂಹಲ ಬಿಜೆಪಿಯಲ್ಲಿ ಮನೆ ಮಾಡಿತ್ತು,
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ
ಸಂಕ್ರಾಂತಿ ಹಬ್ಬದ ಒಳಗಡೆ ನೂತನ ಜಿಲ್ಲಾಧ್ಯಕ್ಷರ ಆಯ್ಕೆ ಆಗಬಹುದು ಎಂಬ ಸುದ್ದಿ ಎಲ್ಲೆಡೆ ಹರಡಿತ್ತು, ಅದರಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ 39 ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳ ಪಟ್ಟಿಯನ್ನು ಘೋಷಿಸಿದ್ದು,
ಶಿವಮೊಗ್ಗ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಟಿ ಡಿ ಮೇಘರಾಜ್ ಅವರನ್ನು ಪುನರ್ ಆಯ್ಕೆ ಮಾಡಲಾಗಿದೆ, ಅಚ್ಚರಿಯ ಹೆಸರು ಬರಬಹುದೆಂಬ ಕುತೂಹಲ ಎಲ್ಲರಲ್ಲಿತ್ತು, ಈಗ ಸತತ ಎರಡನೇ ಬಾರಿಗೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಟಿ ಡಿ ಮೇಘರಾಜ್ ಅವರನ್ನು ಮುಂದುವರಿಸಿದ್ದಾರೆ
ಇನ್ನೂ ಬಿಜೆಪಿಯ ಪ್ರಕೋಷ್ಠಗಳ ರಾಜ್ಯ ಸಂಯೋಜಕರಾಗಿ ಎಸ್ ದತ್ತಾತ್ರಿಯವರನ್ನು ಆಯ್ಕೆ ಮಾಡಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply