ಬಿ ವೈ ರಾಘವೇಂದ್ರ ಪರ ಶಾಮನೂರು ಶಿವಶಂಕರಪ್ಪ ಬ್ಯಾಟಿಂಗ್ ! ರಾಘವೇಂದ್ರರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಹಿರಿಯ ನಾಯಕನಿಂದ ಕರೆ !
ಶಿವಮೊಗ್ಗ : ನಗರದಲ್ಲಿ ನಡೆದ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ಪರ ಬ್ಯಾಟಿಂಗ್ ಮಾಡಿದ್ದಾರೆ.
ರಾಘವೇಂದ್ರರಂತ ಪಾರ್ಲಿಮೆಂಟ್ ಸದಸ್ಯರನ್ನು ಪಡೆದ ನೀವೇ ಧನ್ಯರು. ಕ್ಷೇತ್ರದ ಅಭಿವೃದ್ಧಿ ಎಷ್ಟು ಮಾಡಿದ್ದಾರೆ ಎಂಬುದನ್ನು ತೂಕ ಮಾಡಿ, ಅವರನ್ನು ಗೆಲ್ಲಿಸುವ ದೊಡ್ಡ ಕರ್ತವ್ಯ ನಿಮ್ಮದಾಗಿದೆ ಎಂದ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ.
ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಶಾಮನೂರು ಅವರು, ರಾಘವೇಂದ್ರರಂತ ಪಾರ್ಲಿಮೆಂಟ್ ಸದಸ್ಯರನ್ನು ಪಡೆದ ನೀವೇ ಧನ್ಯರು. ಕ್ಷೇತ್ರದಲ್ಲಿ ಆಗಬೇಕಾದ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಕೂಡ ಮಾಡುತ್ತಿದ್ದಾರೆ. ಕಷ್ಟವಿದ್ದರೂ ಕೂಡ ನಿರಂತರವಾಗಿ ಬೆನ್ನತ್ತಿ ಮಾಡುವ ಧೀಮಂತ ನಾಯಕ, ಒಳ್ಳೆಯ ವ್ಯಕ್ತಿಯನ್ನು ನೀವು ಸಂಸದರಾಗಿ ಆಯ್ಕೆ ಮಾಡಿದ್ದೀರಿ.
ಅವರು ಸಹ ಸಂಸದರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇನ್ನೆರಡು ತಿಂಗಳಲ್ಲಿ ಲೋಕಸಭಾ ಚುನಾವಣೆ ಸಹ ಬರುತ್ತೆ. ಬಿಜೆಪಿಯಿಂದ ರಾಘವೇಂದ್ರ ಅವರೇ ನಿಲ್ತಾರೆ, ಬೇರೆ ಯಾರು ಇಲ್ಲ. ನನ್ನ ಆಶೀರ್ವಾದ ಯಾವಾಗಲೂ ಇರುತ್ತೆ. ಅವರು ಮತ್ತೆ ಸ್ಫರ್ಧೆ ಮಾಡೇ ಮಾಡ್ತಾರೆ, ಕ್ಷೇತ್ರದ ಅಭಿವೃದ್ಧಿ ಎಷ್ಟು ಮಾಡಿದ್ದಾರೆ ಎಂಬುದನ್ನು ತೂಕ ಮಾಡಿ. ಅವರನ್ನು ಗೆಲ್ಲಿಸುವ ದೊಡ್ಡ ಕರ್ತವ್ಯ ನಿಮ್ಮದಾಗಿದೆ ಎಂದ ಹೇಳಿದ್ದಾರೆ.
ಶಾಮನೂರು ಅವರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಸಮೂದಾಯಕ್ಕಾಗಿ ಸ್ವಪಕ್ಷವನ್ನೇ ಶಾಮನೂರು ಅವರು ಮರೆತ? ಕಾಂಗ್ರೆಸ್ ಪಕ್ಷ ಕಡೆಗಣಿಸಿ, ಬಿಜೆಪಿ ಪರ ಭರ್ಜರಿ ಬ್ಯಾಟಿಂಗ್ ಮಾಡಿ, ಬಿಜೆಪಿ ಎಂಪಿ ಗೆಲ್ಲಿಸುವಂತೆ ಕರೆಕೊಟ್ಟಿದ್ದು ಎಷ್ಟು ಸರಿ? ಎಂಬ ಪ್ರಶ್ನೆಗಳು ಕಾರ್ಯಕರ್ತರಲ್ಲಿ ಮೂಡಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply