BIG NEWS : ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್ ಸೇಲ್ವಮಣಿ ವರ್ಗಾವಣೆ ! ನೂತನ ಡಿಸಿಯಾಗಿ ಗುರುದತ್ತ ಹೆಗಡೆ !
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್ ಸೇಲ್ವಮಣಿ ವರ್ಗಾವಣೆಯಾಗಿದ್ದಾರೆ, ನೂತನ ಜಿಲ್ಲಾಧಿಕಾರಿಯಾಗಿ 2014ರ ಬ್ಯಾಚ್‌ನ ಐಎಎಸ್ ಅಧಿಕಾರಿ ಗುರುದತ್ತ ಹೆಗಡೆ ನಿಯೋಜನೆಗೊಂಡಿದ್ದಾರೆ.
ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಡಾ.ಸೆಲ್ವಮಣಿ ಬೆಂಗಳೂರಿನ ಸೆಂಟರ್ ಫಾರ್ ಇ-ಗವರ್ನೆನ್ಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿ ಬೆಂಗಳೂರಿಗೆ ವರ್ಗಾವಣೆ ಗೊಂಡಿದ್ದಾರೆ.
ಇನ್ನೂ ನೂತನ ಜಿಲ್ಲಾಧಿಕಾರಿಯಾಗಿ 2014ರ ಬ್ಯಾಚ್‌ನ ಐಎಎಸ್ ಅಧಿಕಾರಿ ಗುರುದತ್ತ ಹೆಗಡೆ ನಿಯೋಜನೆಗೊಂಡಿದ್ದಾರೆ. ಪ್ರಸ್ತುತ ಧಾರವಾಡ ಜಿಲ್ಲಾಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. 2014ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಗುರುದತ್ತ ಹೆಗಡೆ ಅವರು, ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಹೊನ್ನಗದ್ದೆ ಗ್ರಾಮದವರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply