BIG NEWS: ಶಿವಮೊಗದಲ್ಲಿ ಯುವಕನಿಗೆ ಚಾಕು ಇರಿತ ! ಯುವಕನ ಹೊಟ್ಟೆ ಹಾಗೂ ಎದೆಭಾಗಕ್ಕೆ ಚಾಕು ಇರಿದ ದುಷ್ಕರ್ಮಿಗಳು ! ದಾಳಿ ಮಾಡಿದ್ದೀಕೆ ?
ಶಿವಮೊಗ್ಗ : ಶಿಕಾರಿಪುರದ ಯುವಕನೊಬ್ಬನಿಗೆ ಚಾಕುಇರಿಯಲಾಗಿದೆ. ನಾಲ್ವರು ಯುವಕರು ಕಾಲೇಜ್ ಕಂಪ್ಯೂಟರ್ ಅಪರೇಟರ್ ಆಗಿ ಕೆಲಸ ಮಾಡುತಿದ್ದ ಯುವಕನ ಮೇಲೆ ಚಾಕು ಇರಿದಿದ್ದಾರೆ. ಬೈಕ್‌ನಲ್ಲಿ ವ್ಹೀಲಿಂಗ್ ಮಾಡಬೇಡಿ ಅಂತ ಬುದ್ಧಿವಾದ ಹೇಳಿದ್ದಕ್ಕೆ ಯುವಕನ ಮೇಲೆ ಪುಂಡರು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ
ಈ ವೇಳೆ ಯುವಕನ ಹೊಟ್ಟೆ ಹಾಗೂ ಎದೆಭಾಗಕ್ಕೆ ಚಾಕುವಿನಿಂದಚುಚ್ಚಿ, ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ಗಾಯಗೊಂಡಿರುವ ಯುವಕನಿಗೆ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ
ಇನ್ನೂ ಗಾಯಾಳು ಯುವಕನನ್ನು ಸುಶೀಲ್ ಎಂದು ಗುರುತಿಸಲಾಗಿದ್ದು, ಇವರು ಕುಮುದ್ವತಿ ಕಾಲೇಜ್‌ನಲ್ಲಿ ಕಂಪ್ಯೂಟರ್ ಅಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್ ನಲ್ಲಿ ವೀಲಿಂಗ್ ಮಾಡಬೇಡಿ ಎಂದು ಬುದ್ಧಿವಾದ ಹೇಳಿದ್ದಕ್ಕೆ ನಾಲ್ವರು ದುಷ್ಕರ್ಮಿಗಳ ತಂಡ ಚಾಕು ಇರಿದಿದೆ.
ಶಿಕಾರಿಪುರದ ದೊಡ್ಡಪೇಟೆ ಮುಖ್ಯರಸ್ತೆಯ ಬಳಿ ಕಳೆದ ಕೆಲ ತಿಂಗಳಿಂದ ಕೆಲ ಯುವಕರು ನಿರಂತರವಾಗಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಇದರಿಂದ ಸಾರ್ವಜನಿಕರಿಗೆ ಕಿರಿಕಿರಿ ಹಾಗೂ ತೊಂದರೆ ಆಗುತ್ತಿತ್ತು. ಮತ್ತೆ ಆ ಗುಂಪಿನ ಒಬ್ಬ ಯುವಕ ನಿನ್ನೆ ಮತ್ತೆ ವೀಲಿಂಗ್ ಮಾಡಿದ್ದಾನೆ. ಈ ವೇಳೆ ಯುವಕ ಸುಶೀಲ್ ವೀಲಿಂಗ್ ಮಾಡುತ್ತಿದ್ದ ಯುವಕನಿಗೆ ಬುದ್ಧಿವಾದ ಹೇಳಿದ್ದಾನೆ. ಇದೇ ಕಾರಣಕ್ಕೆ ಯುವಕನ ಮೇಲೆ ದಾಳಿಯಾಗಿದೆ ಎಂದು ತಿಳಿದು ಬಂದಿತ್ತು, ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
Leave a Reply