ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ !
ಸಾಗರ : ಮನೆಯ ಟೆರೇಸ್ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರುನಗರದಲ್ಲಿ ನಡೆದಿದೆ
ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ.ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಶಿರಸಿ ಗೆ ಹೋಗಬೇಕಾಗಿತ್ತು.
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ
ಉದ್ಯೋಗ ಅರಸಿಕೊಂಡು ಸಿರ್ಸಿಗೆ ಹೋಗಲಾಗದೆ, ಸ್ಥಳೀಯವಾಗಿ ಯಾವುದೇ ಉದ್ಯೋಗವಿಲ್ಲದೆ ಜೀವನದಲ್ಲಿ ಜುಗುಪ್ಸೆಗೊಂಡು ತನ್ನ ಸಂಬಂಧಿಕರ ಮನೆಯ ಟೆರೇಸ್ ಮೇಲಿನ ಸಿಂಟೆಕ್ಸ್ಕ ಸ್ಟ್ಯಾಂಡಿಗೆ ನೇಣುಬಿಗಿದುಕೊಂಡುಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಟೆರೇಸ್ ಮೇಲೆ ಮೃತದೇಹ ಕಂಡು ಗಾಬರಿಗೊಂಡ ಸಂಬಂಧಿಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆತ್ಮಹತ್ಯೆ ಪ್ರಕರಣ ಸಂಬಂಧ ಸಾಗರಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply