ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ ಕೃಷಿ ಇಲಾಖೆಯಲ್ಲಿ ಉದ್ಯೋಗವಕಾಶ ! ಅರ್ಜಿ ಆಹ್ವಾನ !

ಶಿವಮೊಗ್ಗ : ಜಂಟಿ ಕೃಷಿ ನಿರ್ದೇಶಕರವರ ಕಛೇರಿಯಲ್ಲಿ 2023-24 ನೇ ಸಾಲಿನ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಸೊರಬ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಹಾಗೂ 2 ವರ್ಷಗಳ ಅನುಭವವಿರುವ ಅಭ್ಯರ್ಥಿಗಳು ಮತ್ತು ಸೊರಬ ತಾ. ಚಂದ್ರಗುತ್ತಿಯ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ ಹೊಂದಿರುವ ಹಾಗೂ 1 ವರ್ಷ ಅನುಭವವಿರುವ ಅಭ್ಯರ್ಥಿಗಳು ಕಂಪ್ಯೂಟರ್ ಸಾಕ್ಷರತೆ ಹೊಂದಿದ್ದು, 45 ವರ್ಷ ವಯಸ್ಸಿನೊಳಗಿರಬೇಕು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ 

ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಯೋಜನಾ ನಿರ್ದೇಶಕರು(ಆತ್ಮ) ಹಾಗೂ ಜಂಟಿ ಕೃಷಿ ನಿರ್ದೇಶಕರು, ಶಿವಮೊಗ್ಗ ಇವರ ಕಛೇರಿಯಲ್ಲಿ ಪಡೆದು ಸ್ವವಿವರಗಳೊಂದಿಗೆ ಮಾ.14 ರೊಳಗಾಗಿ ಸಲ್ಲಿಸುವಂತೆ ಯೋಜನಾ ನಿರ್ದೇಶಕರು ಹಾಗೂ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.