BIG BREAKING NEWS : ದೇಶದಾದ್ಯಂತ  ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ !

BIG BREAKING NEWS : ದೇಶದಾದ್ಯಂತ ಫೇಸ್‌ಬುಕ್, ಇನ್ಸ್ಟಾಗ್ರಾಮ್ ಸರ್ವರ್ ಡೌನ್ !

ಸಾಮಾಜಿಕ ಮಾಧ್ಯಮ ದೈತ್ಯ ಫೇಸ್‌ಬುಕ್ ಮಂಗಳವಾರ ಸರ್ವರ್ ಡೌನ್ ಸಮಸ್ಯೆ ಅನುಭವಿಸಿದೆ ಎಂದು ವರದಿಯಾಗಿದೆ. ಇದರಿಂದಾಗಿ ಲಕ್ಷಾಂತರ ಬಳಕೆದಾರರು ತಮ್ಮ ಖಾತೆಗಳಿಗೆ ಲಾಗಿನ್ ಮಾಡಲು ಸಾಧ್ಯವಾಗುತ್ತಿಲ್ಲ. ಜಗತ್ತಿನಾದ್ಯಂತ ಬಳಕೆದಾರರು ತಮ್ಮ Facebook ಪ್ರೊಫೈಲ್‌ಗಳನ್ನು ಪ್ರವೇಶಿಸಲಾಗದೇ ಸಮಸ್ಯೆಗಳನ್ನು ಎದುರಿಸುತ್ತಿರುವುದನ್ನು ವರದಿ ಮಾಡಿದ್ದಾರೆ

ಮೊಬೈಲ್‌ ಹಾಗೂ ಕಂಪ್ಯೂಟರ್‌ನಲ್ಲಿ ಎರಡೂ ಖಾತೆಗಳು ಲಾಗ್‌ಔಟ್‌ ಆಗಿದ್ದು, ಮತ್ತೆ ಲಾಗ್‌ಇನ್‌ ಆಗುತ್ತಿಲ್ಲ. ಇದರಿಂದಾಗಿ ಸಾವಿರಾರು ಜನ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು ಫೋಟೋ ಮೇಲೆ ಕ್ಲಿಕ್ ಮಾಡಿ 

ಫೇಸ್‌ಬುಕ್‌ಗೆ ಏನಾಗಿದೆ? ಯಾಕೆ ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಖಾತೆಗಳು ಏಕಾಏಕಿ ಲಾಗ್‌ಔಟ್‌ ಆಗಿವೆ? ಯಾಕೆ ಮತ್ತೆ ಲಾಗ್‌ಇನ್‌ ಆಗುತ್ತಿಲ್ಲ ಎಂಬ ಪ್ರಶ್ನೆಗಳನ್ನು ಎಕ್ಸ್‌ನಲ್ಲಿ ಜನ ಕೇಳುತ್ತಿದ್ದಾರೆ. ಇನ್ನು, ಫೇಸ್‌ಬುಕ್‌ ಹಾಗೂ ಇನ್‌ಸ್ಟಾಗ್ರಾಂ ಸರ್ವರ್‌ ಡೌನ್‌ ಆಗಿರುವ ಕುರಿತು ಬಗೆಬಗೆಯ ಟ್ರೋಲ್‌ಗಳು, ವಿಡಿಯೊಗಳನ್ನು ಕೂಡ ಎಕ್ಸ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಜಾಹಿರಾತು :

ಜಗತ್ತಿನಾದ್ಯಂತ ಮಂಗಳವಾರ ರಾತ್ರಿ 9 ಗಂಟೆಯಿಂದ ಸ್ಥಗಿತಗೊಂಡಿದೆ. ಪ್ರಪಂಚದಾದ್ಯಂತದ ಬಳಕೆದಾರರು ತಮ್ಮ ಫೇಸ್ಬುಕ್ ಪ್ರೊಫೈಲ್ಗಳನ್ನು ಲಾಗ್ ಇನ್ ಮಾಡುವಲ್ಲಿ ಮತ್ತು ಪ್ರವೇಶಿಸುವಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.

ಜಗತ್ತಿನಲ್ಲಿ ಸುಮಾರು 200 ಕೋಟಿಗೂ ಅಧಿಕ ಫೇಸ್‍ಬುಕ್ ಬಳಕೆದಾರರಿದ್ದಾರೆ. 41 ಕೋಟಿಗೂ ಅಧಿಕ ಫೇಸ್‍ಬುಕ್ ಬಳಕೆದಾರರು ಮತ್ತು 21 ಕೋಟಿ ಅಧಿಕ ಇನ್‍ಸ್ಟಾಗ್ರಾಮ್ ಬಳಕೆದಾರರು ಇದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.