ಅಕ್ರಮ ಗೋ ಸಾಗಾಟ ! ಇಬ್ಬರ ಮೇಲೆ ಹಲ್ಲೆ !
ತೀರ್ಥಹಳ್ಳಿ : ಅಕ್ರಮ ಗೋ ಸಾಗಾಟದ ಆರೋಪದ ಹಿನ್ನೆಲೆ ವಾಹನ ತಡೆದು ವಾಹನ ಚಾಲಕ ಮತ್ತು ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಗ್ರಾಮದ ಬಳಿ ನಡೆದಿದೆ.
ಆರೋಪದ ಹಿನ್ನೆಲೆ ಗ್ರಾಮಸ್ಥರಿಂದ ವಾಹನ ಚಾಲಕ ಸೇರಿ ಇಬ್ಬರ ಮೇಲೆ ಹಲ್ಲೆ ನಡೆದಿದ್ದು, ಓರ್ವನ ಸ್ಥಿತಿ ಗಂಭೀರವಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಲಾಟೆಯಲ್ಲಿ ಹಲ್ಲೆಗೊಳಗಾದವರು ಉದಯ್ ಕುಮಾರ್ ಹಾಗೂ ರಾಹೀದ್ ಎಂದು ಗುರುತಿಸಲಾಗಿದೆ. ರಾಹೀದ್ ಎಂಬವರ ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಟ್ಟಣದ ಸಮೀಪದ ಕುರುವಳ್ಳಿ ಗ್ರಾಮದಲ್ಲಿ ಅಕ್ರಮ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂಬ ಆರೋಪದ ಮೇರೆಗೆ ವಾಹನ ತಡೆದು ಗ್ರಾಮಸ್ಥರು ಗಲಾಟೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದವರ ಮೇಲೆ ಪ್ರಕರಣ ದಾಖಲಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply