ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಬಿವೈ ರಾಘವೇಂದ್ರರಿಗೆ ಟಿಕೆಟ್ ! ಬಿ ವೈ ಆರ್ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮ
ಶಿವಮೊಗ್ಗ : ಲೋಕಸಭಾ ಚುನಾವಣೆಗಾಗಿ ಇತ್ತೀಚೆಗಷ್ಟೇ ನಾನಾ ರಾಜ್ಯಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ ಹೈಕಮಾಂಡ್, ಮಾ. 13ರಂದು ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಕೆಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಇನ್ನೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಲ್ಕನೇ ಬಾರಿಗೆ ಹಾಲಿ ಸಂಸದ ಬಿ.ವೈ.ರಾಘವೇಂದ್ರರವರಿಗೆ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ. ಟಿಕೆಟ್ ಘೋಷಣೆ ಮಾಡಿದ ಬೆನ್ನಲ್ಲೇ ಬಿವೈಆರ್ ಅಭಿಮಾನಿಗಳು ಮತ್ತು ಪಕ್ಷದ ಕಾರ್ಯಕರ್ತರು ಬುಧುವಾರ ಸಂಜೆ ವಿನೋಬನಗರದ ನಿವಾಸದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.
2009ರಲ್ಲಿ ಮಾಜಿ ಸಿಎಂ ದಿವಂಗತ ಎಸ್ ಬಂಗಾರಪ್ಪನವರ ವಿರುದ್ಧ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದ ಬಿ ವೈ ರಾಘವೇಂದ್ರ ಮತಗಳಿಂದ ಗೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗುತ್ತಾರೆ. ನಂತರ 2014ರಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಶಿವಮೊಗ್ಗ ಲೋಕಸಭಾ ಕ್ಷೇತ್ರವನ್ನು ಗೆದ್ದಿದ್ದರು, ನಂತರ 2018 ರಲ್ಲಿ ರಾಜೀನಾಮೆ ಕೊಟ್ಟಿದ್ದ ಬಿ ಎಸ್ ವೈ ಕುಟುಂಬ ಕಣ ಬಿಟ್ಟುಕೊಡದ ಕಾರಣ ಉಪ ಚುನಾವಣೆಯಲ್ಲಿ ಬಿವೈ ರಾಘವೇಂದ್ರನ ಮತ್ತೆ ಕಣಕ್ಕೆ ಇಳಿಸಲಾಗಿತ್ತು.
ನಂತರ ಉಪಚುನಾವಣೆಯಲ್ಲಿ ಮಧು ಬಂಗಾರಪ್ಪನವರ ವಿರುದ್ಧ ಸ್ಪರ್ಧಿಸಿದ್ದ ಬಿ ವೈ ರಾಘವೇಂದ್ರ ಸರಿಸುಮಾರು ಎರಡು ಕಾಲು ಲಕ್ಷದ ಮತಗಳ ಅಂತರದಿಂದ ಗೆದ್ದು ಗೆಲುವಿನ ಪತಾಕೆ ಹಾರಿಸಿದ್ದರು.
ಇದೆ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಂಸದ ಬಿ.ವೈ.ರಾಘವೇಂದ್ರ, ಮತ್ತೊಮ್ಮೆ ನಮ್ಮ ಪಕ್ಷದ ವತಿಯಿಂದ ಸ್ಪರ್ಧೆ ಮಾಡುವ ಆಶೀರ್ವಾದ ಮಾಡಿದ್ದಾರೆ.ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದಿಂದ ಟಿಕೇಟ್ ಘೋಷಣೆ ಆದ ಬೆನ್ನಲ್ಲೇ ಜವಬ್ದಾರಿ ಹೆಚ್ಚಾಗಿದೆ. ಕೆಲಸ ಮಾಡುವ ಹುಮ್ಮಸ್ಸು ಇನ್ನೂ ಹೆಚ್ಚಾಗಿದೆ. ಪಕ್ಷದ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. 400 ಪ್ಲೆಸ್ ಸೀಟು ಗೆಲ್ಲಬೇಕು ಎಂಬುದು ಪ್ರಧಾನಿ ಮೋದಿ ಅವರ ಗುರಿ. ಗೆಲವಿಗೆ ಪೂರಕ ವಾತಾವರಣ ಇದೆ. ಮತ್ತೊಮ್ಮೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply