ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭರ್ಜರಿ ಪ್ರಚಾರ ! ಪತ್ನಿಗೆ ಸಾಥ್ ನೀಡಿದ ಶಿವಣ್ಣ
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದಿನಿಂದ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ.
ಭದ್ರಾವತಿಯ ಬಾರಂದೂರಿನಲ್ಲಿ ಗೀತಾ ಶಿವರಾಜಕುಮಾರ್ ಗೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಜೈಕಾರ ಹಾಕಿ, ಭವ್ಯ ಸ್ವಾಗತವನ್ನು ಕೋರಿದ್ದಾರೆ.
ತೆರೆದ ವಾಹನದಲ್ಲಿ ಮೆರವಣಿಗೆ ಮುಖಾಂತರ ಜಿಲ್ಲೆಗೆ ಬಂದ ಗೀತಾ ಶಿವರಾಜಕುಮಾರ್ ಅವರಿಗೆ ಪತಿ ಶಿವರಾಜ್ ಕುಮಾರ್ ಸಾಥ್ ನೀಡಿದ್ದಾರೆ. ಈ ವೇಳೆ ಬಿ.ಕೆ. ಸಂಗಮೇಶ್ವರ್, ಸಚಿವ ಮಧು ಬಂಗಾರಪ್ಪ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಅದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಗೀತಾ ಶಿವರಾಜ್ ಕುಮಾರ್ ಅವರನ್ನು ಪಕ್ಷದ ನಾಯಕರು ಸೇರಿದಂತೆ ಹಲವು ಕಾರ್ಯಕರ್ತರು ಸಾಥ್ ನೀಡಿ, ತೆರೆದ ವಾಹನದಲ್ಲಿ ಮೆರವಣಿಗೆ ಮಾಡಿದ್ದಾರೆ. ಈ ವೇಳೆ ಕಾರ್ಯಕರ್ತರು ಗ್ಯಾರಂಟಿ ಪರ ಘೋಷಣೆಗಳ ಕೂಗಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply