ಮಹಿಳಾ ಪಿಜಿಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ !
ಶಿವಮೊಗ್ಗ : ನಗರದ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಮಿಷನ್ ಕಾಂಪೌಂಡ್ ಬಳಿ ಇರುವ ಪಿಜಿಯೊಂದರಲ್ಲಿ ಮಾಲ ಎಂಬ 26 ವರ್ಷದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾ.19 ತಾನೇ ತಾರಿಖ್ ಮಾಲಾ ತಿಂಡಿಗೆ ಬಾರದೆ ಇದ್ದಾಗ. ಮಾಲೀಕರು ಕೊಠಡಿಗೆ ಬಂದು ನೋಡಿದ್ದಾರೆ. ಆ ಸಂದರ್ಭದಲ್ಲಿ ಕೊಠಡಿಯಲ್ಲಿ ಯುವತಿ ಟವೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಮಾಲಾ ಎಂಬ ಯುವತಿ ಸೂಗೂರು ಗ್ರಾಮದವರಾಗಿದ್ದು, ಮನು ಕುಮಾರ್ ಎಂಬತಾ ಮಾನಸಿಕ ಕಿರುಕುಳ ನೀಡಿದ್ದು ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಪ್ರಾಥಮಿಕ ಮಾಹಿತಿ ದೊರೆತಿದೆ.
ಇನ್ನು ಈ ಪ್ರಕರಣದ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ನಡೆಸುತ್ತಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply