BREAKINNG NEWS : ಶಿವಮೊಗ್ಗದಲ್ಲಿ ಮತ್ತೆ ಪೊಲೀಸ್ ಗುಂಡಿನ ಸದ್ದು ! ಮಲ್ಲಿಗೆನಹಳ್ಳಿಯ ಬಳಿ ರೌಡಿ ಶೀಟರ್ ಫಾರು ಕಾಲಿಗೆ ಗುಂಡೇಟು !
ಶಿವಮೊಗ್ಗ : ನಗರದಲ್ಲಿ ಮತ್ತೆ ಪೊಲೀಸ್ ಬಂದೂಕಿನ ಗುಂಡಿನ ಸದ್ದು ಮಾಡಿದೆ. ನಗರದ ಮಲ್ಲಿಗೆನಹಳ್ಳಿಯ ಬಳಿ ಕೊಲೆ ಪ್ರಕರಣದಲ್ಲಿ ತಲೆಮೆರೆಸಿಕೊಂಡಿದ್ದ ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಕಾಲಿಗೆ ಇಂದು ಬೆಳ್ಳಂಬೆಳಿಗ್ಗೆ ಪೊಲೀಸರು ಗುಂಡು ಹಾರಿಸಿದ್ದಾರೆ.
ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಫಾರು ಎಂಬಾತನು ಮಲ್ಲಿಗೆನಹಳ್ಳಿಯ ಬಳಿ ಇರುವ ಮಾಹಿತಿ ತುಂಗಾನಗರ ಪೊಲೀಸರಿಗೆ ಲಭ್ಯವಾಗಿತ್ತು.
ಖಚಿತ ಮಾಹಿತಿಯ ಮೇರೆಗೆ ಆತನ ಬಂಧನಕ್ಕೆ ತೆರಳಿದ ವೇಳೆ ತುಂಗಾನಗರ ಪೊಲೀಸ್ ಠಾಣೆಯ ಸಿಬ್ಬಂದಿ ನಾಗಪ್ಪ ಅವರ ಮೇಲೆ ಆರೋಪಿ ಫಾರೂ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಆತ್ಮ ರಕ್ಷಣೆಗಾಗಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸತ್ಯನಾರಾಯಣ ಅವರು ಆರೋಪಿ ಫಾರೂ ಕಾಲಿಗೆ ಗುಂಡು ಹಾರಿಸಿದ್ದಾರೆ.
ಈ ಕುರಿತು ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಂಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ನಾಗಪ್ಪ ಅವರನ್ನು ಮತ್ತು ಆರೋಪಿ ಫಾರು ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply