ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ವ್ಯಕ್ತಿಯಿಂದ ಹಲ್ಲೆ !
ಸಾಗರ : ತಾಲೂಕಿನ ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆದಿದೆ ಎಂದು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನಾಂಕ 28.03.2024 ರಂದು ರಾತ್ರಿ 12 ಗಂಟೆಗೆ ವೈದ್ಯರು ಕರ್ತವ್ಯ ನಿರ್ವಹಿಸುತ್ತಿದ್ದಾಗ, ಅಪಘಾತದ ಕೇಸ್ ನೊಂದಿಗೆ ಮಣಿ ಎಂಬುವವರು ತಮ್ಮ ತಂದೆಯನ್ನೂ ಆಸ್ಪತ್ರೆಗೆ ಕರೆ ತಂದಾಗ ಚಿಕಿತ್ಸೆ ನೀಡುವ ವಿಚಾರವಾಗಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಹ ಸಿಬ್ಬಂದಿಗಳೊಡನೆ ದೈಹಿಕವಾಗಿ ಹಲ್ಲೆ ನಡೆಸಿ, ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು ಚಿಕಿತ್ಸೆ ನೀಡಲು ತಡವಾಗುವಂತೆ ಮಾಡಿ ಅಧಿಕಾರಿಗಳ ಮೇಲೆ ಎಗರಾಡಿ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿರುವ ಆರೋಪದಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ ವೈದ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಇನ್ನು ಪ್ರಕರಣ ದಾಖಲಿಸಿಕೊಂಡ ಆನಂದಪುರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ವರದಿ : ಅಮಿತ್ ಆನಂದಪುರ
Leave a Reply