ದ್ವಿತೀಯ ಪಿಯುಸಿ ಪರೀಕ್ಷಾ ಪಲಿತಾಂಶ ಪ್ರಕಟ ! ಎಂಟನೇ ಸ್ಥಾನ ಕಾಯ್ದುಕೊಂಡ ಶಿವಮೊಗ್ಗ !
ಶಿವಮೊಗ್ಗ : 2023-24ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಬಾರಿ ಮೂರು ಪರೀಕ್ಷೆಗಳನ್ನು ನಡೆಸುತ್ತಿದ್ದು ಇದು ದ್ವಿತೀಯ ಪಿಯುಸಿ ಪರೀಕ್ಷೆ 1 ರ ಫಲಿತಾಂಶವಾಗಿದೆ. 6.9 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆದಿದ್ದರು.
ಇದರ ಫಲಿತಾಂಶ ಇಂದು ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಇಂದು ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶ ಪ್ರಕಟ ಮಾಡಿದೆ.
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದಿದ್ದು,ಉಡುಪಿ ಜಿಲ್ಲೆ ರಾಜ್ಯದಲ್ಲೇ ದ್ವಿತೀಯ ಸ್ಥಾನ ಪಡೆದಿದೆ. ಶಿವಮೊಗ್ಗ ಈ ಬಾರಿಯೂ ಎಂಟನೇ ಸ್ಥಾನವನ್ನು ಕಾಯ್ದುಕೊಂಡಿದ್ದು ಜಿಲ್ಲೆಯಲ್ಲಿ ಈ ಬಾರಿ ಶೇ 88.58 ದಾಖಲಾಗಿದೆ.ಈ ಬಾರಿ ಪರೀಕ್ಷೆಯನ್ನ 15,348 ಜನ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply