ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ ಶಿವಮೊಗ್ಗ ಪೊಲೀಸರು ! ಕಾರಣವೇನು ?

ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳ ಮನೆ ಮೇಲೆ ದಾಳಿ ನಡೆಸಿದ ಶಿವಮೊಗ್ಗ ಪೊಲೀಸರು ! ಕಾರಣವೇನು ?

ಶಿವಮೊಗ್ಗ : ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾದ್ಯಂತ ರೌಡಿ ಶೀಟರ್ ಗಳ ಮನೆಗಳ ಮೇಲೆ ಪೊಲೀಸರು ಇಂದು ಬೆಳಗ್ಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ನೇತೃತ್ವದಲ್ಲಿ ಜಿಲ್ಲೆಯ ಎಲ್ಲೆ ತಾಲೂಕಿನ ಪೊಲೀಸ್‌ ಠಾಣೆಗಳ ವ್ಯಾಪ್ತಿ ರೌಡಿಗಳ ಮನೆಗಳ ಮೇಲೆ ಬೆಳಗಿನ ಜಾವ ದಾಳಿ ನಡೆಸಲಾಯಿತು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

 

ಈ ವೇಳೆ ಮಾದಕ ವಸ್ತುಗಳು, ಮಾರಕಾಸ್ತ್ರಗಳಿವೆಯೇ ಎಂದು ರೌಡಿ ಶೀಟರ್ ಗಳ ಮನೆಗಳಲ್ಲಿ ಪೊಲೀಸರು ತಪಾಸಣೆ ನಡೆಸಿದರು.

ಅಲ್ಲದೆ ರೌಡಿ ಶೀಟರ್ ಗಳು ಪ್ರಸ್ತುತ ನಿರ್ವಹಿಸುತ್ತಿರುವ ಕೆಲಸ, ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಬಗ್ಗೆ ವಿಚಾರಣೆ ನಡೆಸಿದರು. ಲೋಕಸಭೆ ಚುನಾವಣೆ ಸಂದರ್ಭ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ಅವರಿ ಎಚ್ಚರಿಕೆ ನೀಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ

ಶಿವಮೊಗ್ಗದ ಡಿವೈಎಸ್ಪಿಗಳಾದ ಬಾಬು ಆಂಜನಪ್ಪ, ಎಂ.ಸುರೇಶ್‌, ಭದ್ರಾವತಿ ಡಿವೈಎಸ್ಪಿ ನಾಗರಾಜ್‌, ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ತಿಮ್ಮಣ್ಣ ನಾಯ್ಕ್‌, ಶಿಕಾರಿಪುರ ಡಿವೈಎಸ್‌ಪಿ ಕೇಶವ್‌, ತೀರ್ಥಹಳ್ಳಿ ಡಿವೈಎಸ್‌ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ. 

ಠಾಣೆಗಳ ಇನ್ ಸ್ಪೆಕ್ಟರ್‌, ಸಬ್‌ ಇನ್ ಸ್ಪೆಕ್ಟರ್‌ಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.