ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ಹಾಗೂ ಕನ್ನಡದ ಕುಳ್ಳ ಎಂದೇ ಹೆಸರುವಾಸಿಯಾಗಿದ್ದ ದ್ವಾರಕೀಶ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ದ್ವಾರಕೀಶ್ ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವಿನ ಸುದ್ದಿಯನ್ನು ಕುಟುಂಬದವರು ಖಚಿತಪಡಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹಾಸ್ಯ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ತಮ್ಮದೇ ಛಾಪು ಮೂಡಿಸಿದ್ದಾರೆ.
ಡಾ. ರಾಜ್ಕುಮಾರ್ ಅವರಿಂದ ಹಿಡಿದು ವಿಷ್ಣುವರ್ಧನ್, ಅಂಬರೀಷ್, ಶಂಕರ್ನಾಗ್ ಸೇರಿದಂತೆ ಹೆಸರಾಂತ ಕಲಾವಿದರ ಜತೆ ನಟಿಸಿ ಸೈ ಎನಿಸಿಕೊಂಡರು. ಇದೀಗ ದ್ವಾರಕೀಶ್ ಅವರ ನಿಧನದಿಂದಾಗಿ ಚಿತ್ರರಂಗ ಪ್ರತಿಭಾವಂತ ನಟರನ್ನು ಕಳೆದುಕೊಂಡಿದೆ. ದ್ವಾರಕೀಶ್ ಅವರ ಸಾವಿಗೆ ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply