ಏ.18ರಂದು ಬಿ.ವೈ. ರಾಘವೇಂದ್ರ ನಾಮಪತ್ರ ಸಲ್ಲಿಕೆ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಭಾಗಿ !

ಶಿವಮೊಗ್ಗ : ಜೆಡಿಎಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಏ.18ರಂದು ನಾಮಪತ್ರ ಸಲ್ಲಿಸಲಿದ್ದು, ಜೆಡಿಎಸ್ ಪಕ್ಷದ ಕಾರ್ಯಕರ್ತರೆಲ್ಲರೂ ಇದರಲ್ಲಿ ಭಾಗವಹಿಸುತ್ತಾರೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಹಾಗೂ ಕೋರ್ ಸಮಿಟಿ ಸದಸ್ಯ ಕೆ.ಬಿ. ಪ್ರಸನ್ನಕುಮಾ‌ರ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಪಕ್ಷದ ಜಿಲ್ಲೆಯ ಎಲ್ಲಾ ಮುಖಂಡರು, ಬೂತ್‌ ಮಟ್ಟದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಹಿಂದೆ ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಇದ್ದ ಜನ ಸಂಖ್ಯೆಗಿಂತಲೂ ಅತಿ ಹೆಚ್ಚಾಗಿ ನಮ್ಮ ಪಕ್ಷದ ಮತ್ತು ಮೈತ್ರಿ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದು, ಇದೊಂದು ಅಭೂತಪೂರ್ವ ಸನ್ನಿವೇಶಕ್ಕೆ ಕಾರಣವಾಗುತ್ತದೆ ಎಂದರು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಮುಖ್ಯವಾಗಿ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ನಮ್ಮ ಪಕ್ಷದಅಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಆಗಮಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.

ಹೆಚ್.ಡಿ. ಕುಮಾರಸ್ವಾಮಿಯವರು ಕೇವಲ ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಮಾತ್ರ ಬಂದುಹೋಗದೆ ಚುನಾವಣೆಯ ಮತ ಪ್ರಚಾರದ ಸಮಯದಲ್ಲೂ ಕೂಡ ಇಡೀ ಜಿಲ್ಲೆಯಲ್ಲಿ ಭಾಗವಹಿಸಿ ಮತ ಯಾಚಿಸಿ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸಲಿದ್ದಾರೆ. ಮೈತ್ರಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ರಾಮಕೃಷ್ಣ ದೀಪಕ್‌ಸಿಂಗ್, ಗೀತಾಸತೀಶ್, ಎಸ್.ವಿ. ರಾಜಮ್ಮ ತ್ಯಾಗರಾಜ್, ನರಸಿಂಹಮೂರ್ತಿ ಗಂಧದಮನೆ, ಸಿದ್ದಪ್ಪ ರಘು, ಸಂಗಯ್ಯ, ಅಬ್ದುಲ್ ವಾಜೀದ್, ವಿನಯ್, ರಾಚಯ್ಯ, ಪುಷ್ಪ, ಆಯನೂರು ಶಿವಾನಾಯಕ, ಸಂಜಯ್ ಕಶ್ಯಪ್, ಪ್ರಭು ಇನ್ನಿತರರು ಉಪಸ್ಥಿತರಿದ್ದರು.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.