ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಮಧ್ಯೆ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್ಡಿ ಕುಮಾರಸ್ವಾಮಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ನಾಮ ಪತ್ರ ಮೆರವಣಿಗೆಗೆ ಪಾಲ್ಗೊಳ್ಳಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.
ಈ ವೇಳೆ ಸುದ್ದಿಗಾರದೊಂದಿಗೆ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬಿ ವೈ ರಾಘವೇಂದ್ರ ಮೂರು ಬಾರಿ ಲೋಕಸಭಾ ಸದಸ್ಯರಾಗಿ ಶಿವಮೊಗ್ಗದಿಂದ ಆಯ್ಕೆಯಾಗಿದ್ದಾರೆ. ಉತ್ತಮವಾಗಿ ಕೆಲಸ ಮಾಡಿದ್ದಾರೆ ಮೈತ್ರಿಯ ಹೊಂದಾಣಿಕೆಯಿಂದ ನಾವೆಲ್ಲರೂ ಜೊತೆಗೂಡಿ ಕೆಲಸ ಮಾಡುತ್ತಿದ್ದೇವೆ ಅವರಿಗೆ ಯಶಸ್ಸು ಸಿಗಬೇಕೆನ್ನುವುದು ಕ್ಷೇತ್ರದ ಜನರ ಮತ್ತು ನನ್ನ ಅಭಿಲಾಷೆ ಎಂದು ಹೇಳಿದರು.
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಇಳಿದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಚ್ ಡಿ ಕುಮಾರಸ್ವಾಮಿ ಇದರಲ್ಲಿ ತಪ್ಪೇನಿದೆ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಯಾರ ಪರ ಬೇಕಾದರೂ ಪ್ರಚಾರ ಮಾಡಬಹುದು. ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ಅದಕ್ಕೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಯಾರು ಯಾರ ಪರವಾಗಿಬೇಕಾದ್ರು ಪ್ರಚಾರ ಮಾಡಬಹುದು ಎಂದರು.
ಮಂಡ್ಯ ಲೋಕಸಭಾ ಚುನಾವಣಾ ಅಖಾಡದಲ್ಲಿ ನಟ ದರ್ಶನ್ ಎಂಟ್ರಿಯಾಗಿದೆ. ಸುಮಲತಾ ಬಿಜೆಪಿಯಲ್ಲಿದ್ದರೂ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದು ಇಂದು ಮಂಡ್ಯದಲ್ಲಿ ಸ್ಟಾರ್ ಚಂದ್ರುಪರ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply