ತೀರ್ಥಹಳ್ಳಿ : ಜಿಲ್ಲೆಯಲ್ಲಿ ಈಗಷ್ಟೇ ಮಳೆ ಪ್ರಾರಂಭವಾಗಿದೆ, ಜಿಲ್ಲೆಯಲ್ಲಿ ಪ್ರಾರಂಭವಾದ ಮಳೆಗೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಬಳಿ ಮರ ಬಿದ್ದು ಓರ್ವ ವ್ಯಕ್ತಿ ಸಾವುಕಂಡಿರುವ ಘಟನೆ ನಡೆದಿದೆ
ಇಂದು ( ಗುರುವಾರ ) ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಮರಗಳು ಉರುಳಿ ಬಿದ್ದಿವೆ. ಕೋಣಂದೂರು ಸಮೀಪದ ದೇಮ್ಲಾಪುರ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ತೊರೆಬೈಲು ಗ್ರಾಮದ ಸಂಪಗಾರಿನ ಬಳಿ ಈ ಘಟನೆ ಸಂಭವಿಸಿದೆ
ಜಯಂತ್ ಭಟ್ ಎನ್ನುವ 69 ವಯಸ್ಸಿನ ವ್ಯಕ್ತಿ ಕೋಣಂದೂರಿನಿಂದ ಮನೆಗೆ ಹೋಗುವಾಗ ಬಾರಿ ಗಾಳಿ ಮಳೆಗೆ ಆಕೆಶಿಯ ಮರ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ !
ಆಗುಂಬೆ ಘಾಟಿಯ ಮೂರನೇ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಕಾರಣ ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ರಸ್ತೆಗೆ ಅಡ್ಡಲಾಗಿ ಬಿದ್ದ ಮರ ತೆರವುಗೊಳಿಸಲು ಕಾರ್ಯಾಚರಣೆ ನಡೆಸಲಾಗಿದೆ. ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಸಂಚಾರದಟ್ಟಣೆ ಉಂಟಾಗಿದೆ. ಮರ ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ಸಾಗಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply