ಶಿವಮೊಗ್ಗ : ನಾನು ಯಾವ ಉಚ್ಚಾಟನೆಗೆ ಹೆದರುವುದಿಲ್ಲ. ನಾನು ಚುನಾವಣೆ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ. ಮತ್ತೆ ವಾಪಸ್ ಬಿಜೆಪಿಗೆ ಹೋಗುತ್ತೇನೆ ಎಂದು ಕೆ ಎಸ್ ಈಶ್ವರಪ್ಪ ಉಚ್ಛಾಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಉಚ್ಛಾಟನೆ ಬಗ್ಗೆ ನನಗೆ ಯಾವುದೇ ಪತ್ರ ಬಂದಿಲ್ಲ ನಾನು ಪಕ್ಷೇತರ ಅಭ್ಯರ್ಥಿ ಆಗಿ ಕಣಕ್ಕೆ ನಿರ್ಧಾರ ಮಾಡಿದ್ದೇನೆ. ಅಂದಿನಿಂದ ಇಂದಿನವರೆಗೆ ನಾನು ಅದನ್ನೇ ಹೇಳಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಬಿಎಸ್ವೈ ಕುಟುಂಬ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರು. ಮೋದಿ ಕಾರ್ಯಕ್ರಮಕ್ಕೆ ಈಶ್ವರಪ್ಪ ಬರುತ್ತಾರೆ ಅಂದರು, ಬಳಿಕ ನಾಮಪತ್ರ ಹಾಕುವುದಿಲ್ಲ ಎಂದಿದ್ದರು, 19ನೇ ತಾರೀಖು ಶಾಕಿಂಗ್ ಎಂದು ಹೇಳಿದ್ದರು. ನನ್ನ ಸ್ಪರ್ಧೆ ಯನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದರು ಎಂದು ಕೆ ಎಸ್ ಈಶ್ವರಪ್ಪ ಬಿ ಎಸ್ ವೈ ಕುಟುಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಂದು ನಾಮಪತ್ರ ವಾಪಸ್ ಗೆ ಕಡೆ ದಿನವಾಗಿತ್ತು. ನಾನು ವಾಪಸ್ ಪಡೆಯದೇ ಚುನಾವಣಾ ಕಣದಲ್ಲಿದ್ದೇನೆ. ನನಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಬೆಂಬಲ ಇದೆ. ರೈತನ ಚಿಹ್ನೆ ಬಂದಿರುವುದು ಸಂತೋಷ ಎಂದಿರುವ ಈಶ್ವರಪ್ಪ, ಬಿಎಸ್ ಯಡಿಯೂರಪ್ಪ ಮತ್ತು ಮಕ್ಕಳ ಬಗ್ಗೆ ಮತ್ತೆ ಆಕ್ರೋಶ ವ್ಯಕ್ತಪಡಿಸಿದರು. ಅವರು ಷಡ್ಯಂತ್ರ ಮಾಡುತ್ತಾ ಬಂದರು. ಅಪ್ಪ ಮಕ್ಕಳ ಆರಂಭದಿಂದ ಸುಳ್ಳು ಹೇಳುತ್ತಾ ಬಂದಿದ್ದಾರೆ. ಅವರು ಯಾವ ಮುಖ ಇಟ್ಟುಕೊಂಡು ಉತ್ತರ ನೀಡುತ್ತಾರೆ? ಅವರು ಪ್ರತಿಕ್ರಿಯೆ ನೀಡಲಿ, ನಂತರ ನಾನು ಅವರಿಗೆ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ .
ಉಚ್ಚಾಟನೆ ಇದು ತಾತ್ಕಾಲಿಕವಾಗಿದೆ. ನಾನು ಐದು ಬಾರಿ ಕಮಲದ ಚಿಹ್ನೆಯಿಂದ ಸ್ಪರ್ಧೆ ಮಾಡಿದ್ದೆ. ಈಗ ರೈತನ ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕಿದೆ ಅಂತ ಈಶ್ವರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. ನನಗೆ ಶೇ 60ರಷ್ಟು ಬಿಜೆಪಿ ಬೆಂಬಲ ಇದೆ. ಶಿವಮೊಗ್ಗ ಲೋಕಸಭೆಯಲ್ಲಿ ಹೆಚ್ಚು ಬೆಂಬಲ ಇದೆ. ಸಂಘದ ಹಿರಿಯರು, ಪಕ್ಷದ ಹಿರಿಯರು ನನ್ನ ಸ್ಪರ್ಧೆಗೆ ಬೆಂಬಲ ಸೂಚಿಸಿದ್ದಾರೆ ಅಂತ ಈಶ್ವರಪ್ಪ ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply