ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಪರ ಪ್ರಚಾರ ನಡೆಸಿದ ಮಹಿಳೆ ಮೇಲೆ ಹಲ್ಲೆ ನಡೆದಿದ್ದು, ಈ ಬಗ್ಗೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಾರಿಕಾಂಬಾ ಟ್ರಸ್ಟ್ ಸಂಯೋಜಕಿ ಪೂರ್ಣಿಮಾ ಎಂಬುವವರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಏಪ್ರಿಲ್ 20 ರಂದು ಪೂರ್ಣಿಮಾ ಸವರ್ಲೈನ್ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಈಶ್ವರಪ್ಪ ಪರ ಪ್ರಚಾರಕ್ಕಾಗಿ ಜನರನ್ನು ಸಂಯೋಜಿಸುತ್ತಿದ್ದರು.
ಈ ವೇಳೆ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರ ಗುಂಪು ಪೂರ್ಣಿಮಾ ಮೇಲೆ ಹಲ್ಲೆ ನಡೆಸಿದೆ. ಈಶ್ವರಪ್ಪ ಪರ ಪ್ರಚಾರ ನಡೆಸದಂತೆ ಬೆದರಿಕೆ ಹಾಕಿ ಅಶ್ಲೀಲ ಪದಗಳಿಂದ ನಿಂದಿಸಿದ್ದಾಗಿ ಮಹಿಳೆ ಆರೋಪಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply