ಶಿವಮೊಗ್ಗ : ನಗರದ ಬುದ್ಧ ನಗರದಲ್ಲಿ ಇಬ್ಬರ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಮತ್ತೋರ್ವ ಯುವಕನಿಗೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗದ ಬುದ್ಧ ನಗರದ ಮೂರನೇ ತಿರುವಿನಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದ ಅಜಯ್ ಕುಮಾರ್ ಎಂಬಾತನ ಮೇಲೆ ಲೋಹಿತ್ ಎಂಬ ಯುವಕನೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ ,
ಬುದ್ಧ ನಗರದಲ್ಲಿ ನಿಂತಿದ್ದಾಗ ಅಜಯ್ ಕುಮಾರ್ ಮತ್ತು ಲೋಹಿತ್ ಇಬ್ಬರ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಜಗಳ ತಾರಕಕ್ಕೇರಿ ಲೋಹಿತ್ ಎಂಬಾತ ಅಜಯ್ ಕುಮಾರ್ ನ ಭುಜ ಮತ್ತು ತಲೆಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ . ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದು. ಈ ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply