ಶಿವಮೊಗ್ಗ : ನಗರದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಯೊಂದರಲ್ಲಿ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಮೊಬೈಲ್ ಅಂಗಡಿಯಲ್ಲಿದ್ದ ಬೆಲೆಬಾಳುವ ವಸ್ತುಗಳು ಸುಟ್ಟುಕರಕಲಾಗಿವೆ
ಶಿವಮೊಗ್ಗ ಖಾಸಗಿ ಬಸ್ ನಿಲ್ದಾಣದಲ್ಲಿ ವಾಸಿಮ್ ಎಂಬುವರಿಗೆ ಸೇರಿದ ಮೊಬೈಲ್ ಅಂಗಡಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಕಂಪ್ಯೂಟರ್ ಹಾಗೂ ರಿಪೇರಿಗೆ ಬಂದ ಮೊಬೈಲ್ ಗಳು ಸೇರಿ ಸರಿ ಸುಮಾರು 4 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿ ಆಗಿದೆ.
ವಿಡಿಯೋ ⬇️⬇️
ಸರಿಸುಮಾರು 10:30 ಯಿಂದ 11:00ಗಂಟೆಯ ಸಮಯದಲ್ಲಿ ಈ ಘಟನೆ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ, ಇನ್ನೂ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದ್ದು , ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply