ಮೊಮ್ಮೊಗನನ್ನ ಪಕ್ಷದಿಂದ ಉಚ್ಛಾಟಿಸಿದ ಹೆಚ್.ಡಿ. ದೇವೇಗೌಡರು ! ಜೆಡಿಎಸ್ ನಿಂದ ಪ್ರಜ್ವಲ್ ಕಿಕೌಟ್ !

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವಿಡಿಯೋ ರಾಜ್ಯದೆಲ್ಲೆಡೆ ತೀವ್ರ ಸಂಚಲನ ಮೂಡಿಸಿದೆ. ಇದರ ಭಾಗವಾಗಿ ಜೆಡಿಎಸ್ ವರಿಷ್ಠ ರಿಂದ ಮೊದಲ ಕ್ರಮ ಜರುಗಿಸಲಾಗಿದೆಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ.

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರು ಮಹತ್ವದ ಆದೇಶ ನೀಡಿದ್ದಾರೆ. ಹಾಸನದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋ ಪ್ರಕರಣ ಜೆಡಿಎಸ್ ಪಕ್ಷದಲ್ಲಿ ಮುಜುಗರ ಹಾಗೂ ತೀವ್ರ ಸಂಚಲನ ಸೃಷ್ಟಿಸಿತ್ತು. ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ ಹಾಗೂ ಎಫ್‌ಐಆರ್ ದಾಖಲಾದ ಮೇಲೆ ಜೆಡಿಎಸ್ ನಾಯಕರು ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದಲೇ ವಜಾಗೊಳಿಸುವಂತೆ ಆಗ್ರಹಿಸಿದ್ದರು.

ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಪ್ರಕರಣ ಇಡೀ ದೇಶಾದ್ಯಂತ ಸಂಚಲನ ಸೃಷ್ಟಿಸಿದ ಮೇಲೆ ಜೆಡಿಎಸ್ ವರಿಷ್ಠ, ಹೆಚ್.ಡಿ ದೇವೇಗೌಡರು ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಉಚ್ಛಾಟಿಸುವ ನಿರ್ಧಾರ ಕೈಗೊಂಡಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 


Leave a Reply

Your email address will not be published.