ಶಿವಮೊಗ್ಗ : ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ದೃಶ್ಯಾವಳಿಗಳು ವೈರಲ್ ಆಗಿವೆ. ಈ ಸಂಬಂಧ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೂ ಆದೇಶಿಸಿದೆ. ಈ ಬೆನ್ನಲ್ಲೇ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಪುತ್ರ ಕೆ.ಇ ಕಾಂತೇಶ್ ಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ.ಹೀಗಾಗಿ ಅವರು ನಿರ್ಬಂಧಕಾಜ್ಞೆಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಬೆನ್ನಲ್ಲೇ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಹಾಗೂ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಪುತ್ರ ಕೆ.ಇ ಕಾಂತೇಶ್ ಅವರಿಗೂ ಅಶ್ಲೀಲ ಸಿಡಿ ಭೀತಿ ಎದುರಾಗಿದೆ.
ತಮ್ಮ ಅಶ್ಲೀಲ ಸಿಡಿ ಭೀತಿಯಿಂದಾಗಿ ಯಾವುದೇ ಮಾನಹಾನಿ ದೃಶ್ಯ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಮಧ್ಯಂತರ ಆದೇಶ ಪಡೆದಿದ್ದಾರೆ.
ಲೋಕಸಭಾ ಚುನಾವಣೆಯ ವೇಳೆಯಲ್ಲಿ ತಮ್ಮ ಹೆಸರಿಗೆ ಮಸಿ ಬಳಿಯೋ ಸಾಧ್ಯತೆಯಿಂದ ಅಶ್ಲೀಲ ಸಿಡಿ ಬಿಡುಗಡೆ ಮಾಡದಂತೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆಯನ್ನು ತಂದಿದ್ದಾರೆ
ಅರ್ಜಿಯಲ್ಲಿ ಏನಿದೆ?:
ಲೋಕಸಭೆ ಚುನಾವಣೆ ನಡೆಯುತ್ತಿರುವ ಈ ಸಮಯದಲ್ಲಿ ಕೆಲ ಮಾಧ್ಯಮಗಳು ನನ್ನ ಘನತೆ, ಗೌರವ ಮತ್ತು ಮಾನಹಾನಿ ಮಾಡಲು ಪ್ರಯತ್ನಿಸುತ್ತಿವೆ ಎಂಬ ಅನುಮಾನಗಳಿವೆ. ನನ್ನನ್ನೇ ನಕಲು ಮಾಡಿದ ಅಶ್ಲೀಲ ಪೋಟೊ, ವಿಡಿಯೊ ಮತ್ತು ಅಡಿಯೊಗಳನ್ನು ಪ್ರಸಾರ ಮಾಡಲು ಯತ್ನಿಸುತ್ತಿವೆ. ಒಂದೊಮ್ಮೆ ಅಂತಹ ಅಕ್ಷೇಪಾರ್ಹ ವಿಡಿಯೊ. ಫೋಟೊಗಳು ಪ್ರಸಾರಗೊಂಡರೆ ಅಥವಾ ಪ್ರಕಟವಾದರೆ ನನ್ನ ಮಾನಹಾನಿಯಾಗುತ್ತದೆ. ಆದ್ದರಿಂದ ಮಾಧ್ಯಮಗಳ ವಿರುದ್ಧ ಮಧ್ಯಂತರ ನಿರ್ಬಂಧಕಾಜ್ಞೆ ಆದೇಶ ನೀಡಬೇಕು’ ಎಂದು ಕಾಂತೇಶ್ ದಾವೆಯಲ್ಲಿ ಕೋರಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply