ಶಿವಮೊಗ್ಗ : ನಗರದ ಲಷ್ಕರ್ ಮೊಹಲ್ಲದ ಮೀನು ಮಾರುಕಟ್ಟೆಯ ಬಳಿ ಇಬ್ಬರನ್ನ ಭೀಕರವಾಗಿ ಹತ್ಯೆ ಮಾಡಲಾಗಿದೆ
ಇಂದು ಸಂಜೆ ಆರು ಗಂಟೆಯ ಸುಮಾರಿಗೆ ಗುಂಪೊಂದು ಇಬ್ಬರ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದು, ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕೋಟೆ ಪೊಲೀಸ್ ಠಾಣೆ ಪೊಲೀಸರು ದೌಡಾಯಿಸಿದ್ದಾರೆ
ಮೂಲಗಳ ಪ್ರಕಾರ ಕೊಲೆಯಾದವರು ವ್ಯಕ್ತಿಯೊಬ್ಬನ ಮೇಲೆ ದಾಳಿಗೆ ಬಂದಿದ್ದರು ಎಂದು ತಿಳಿದು ಬಂದಿದ್ದು ಸ್ಥಳಕ್ಕೆ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಕೊಲೆಯದವರು ಯಾರೆಂಬುದರ ಮಾಹಿತಿ ಲಭ್ಯವಾಗಬೇಕಿದೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply