ಶಿವಮೊಗ್ಗ : 2023-2024ನೇ ಸಾಲಿನ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ.
ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಈ ಬಾರಿ ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ಪರೀಕ್ಷೆ ನಡೆದಿತ್ತು, ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು 8.69 ಲಕ್ಷ ವಿದ್ಯಾರ್ಥಿಗಳು ಬರೆದಿದ್ದರು.
ಕರ್ನಾಟಕದಲ್ಲಿ ಈ ಸಲ ಎಸ್ಎಸ್‌ಎಲ್‌ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 4.41 ಲಕ್ಷ ಬಾಲಕರು, 4.28 ಬಾಲಕಿಯರು. ಅಲ್ಲದೆ, 18,225 ಖಾಸಗಿ ವಿದ್ಯಾರ್ಥಿಗಳು, 41,375 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 5,424 ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳು ಕರ್ನಾಟಕದ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದರು.
ಫಲಿತಾಂಶ ನೋಡಲು ಲಿಂಕ್ ಮೇಲೆ ಕ್ಲಿಕ್ ಮಾಡಿ
ಶೇ 94. ಫಲಿತಾಂಶದೊಂದಿಗೆ ಉಡುಪಿ ಪ್ರಥಮ ಸ್ಥಾನದಲ್ಲಿದೆ, ಶೇ. 92.12 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಎರಡನೇ ಸ್ಥಾನದಲ್ಲಿದ್ದರೆ, ಶೇ. 88.67 ಫಲಿತಾಂಶದೊಂದಿಗೆ ಶಿವಮೊಗ್ಗ ಮೂರನೇ ಸ್ಥಾನದಲ್ಲಿದೆ. ಶೇ. 81.11 ಫಲಿತಾಂಶದೊಂದಿಗೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಳೆದ ಬಾರಿ 87.87ರಷ್ಟು ಫಲಿತಾಂಶ ಬಂದಿತ್ತು. ಇನ್ನು ಬಾಲಕರು ಶೇ. 65.90 ಫಲಿತಾಂಶದೊಂದಿಗೆ ತೀವ್ರ ಕುಸಿತ ಕಂಡಿದ್ದಾರೆ. ಕಳೆದ ಬಾರಿ 80.08 ರಷ್ಟು ಫಲಿತಾಂಶ ಬಂದಿತ್ತು.
ಪಾಸಾದರೂ ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-2, ಪರೀಕ್ಷೆ-3ಕ್ಕೆ ಅವಕಾಶ: ವಿದ್ಯಾರ್ಥಿಗಳು ಪಾಸಾಗಲಿ ಅಥವಾ ಫೇಲಾಗಲಿ 3 ಬಾರಿ ಪರೀಕ್ಷೆ ಬರೆಯಲು ಅವಕಾಶವಿದೆ. ಪಾಸಾದರೂ ಅಂಕ ಹೆಚ್ಚಿಸಿಕೊಳ್ಳಲು ಪರೀಕ್ಷೆ-2, ಪರೀಕ್ಷೆ-3 ಬರೆಯಬಹುದು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply