ಶಿವಮೊಗ್ಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ಮತದಾನ ಮುಗಿದಿದ್ದು. ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ, ಇದರ ನಡುವೆ ಅಂದರೆ ಲೋಕಸಭೆ ಚುನಾವಣೆ ನಡೆದ ಬೆನ್ನಲ್ಲೇ ಈಗ ಪರಿಷತ್ ಫೈಟ್ ಶುರುವಾಗಿದೆ, ಶನಿವಾರ ರಾತ್ರಿ ಭಾರತೀಯ ಜನತಾ ಪಾರ್ಟಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಹೆಸರಾಂತ ಮಕ್ಕಳ ತಜ್ಞ ಡಾ. ಧನಂಜಯ ಸರ್ಜಿ ಸ್ಪರ್ಧಿಸಲಿದ್ದಾರೆ
ಈ ಹಿಂದೆ ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಡಾ. ಧನಂಜಯ ಸರ್ಜಿ ಕೊನೆಯ ಕ್ಷಣದಲ್ಲಿ ಟಿಕೆಟ್ ಕೈ ತಪ್ಪಿತ್ತು. ಇದೀಗ ಬಿಜೆಪಿ ಡಾ. ಧನಂಜಯ್ ಸರ್ಜಿ ಅವರಿಗೆ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡಿದೆ ಶಿವಮೊಗ್ಗ ಸೇರಿದಂತೆ ರಾಜ್ಯದಲ್ಲಿ ಮಕ್ಕಳ ಉತ್ತಮ ವೈದ್ಯ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ.
ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ
ಶಿವಮೊಗ್ಗ ಲೋಕಸಭಾ ಕ್ಷೇತ್ರ ಗ್ರಾಮಾಂತರ ಕ್ಷೇತ್ರದ ಜವಾಬ್ದಾರಿ ಹೊತ್ತಿದ್ದ ಡಾ ಸರ್ಜಿ ಅತ್ಯುತ್ತಮವಾಗಿ ನಿರ್ವಹಣೆ ಮಾಡಿದ್ದರು, ಇನ್ನೂ ವಿಜಯೇಂದ್ರ, ಬಿ ವೈ ರಾಘವೇಂದ್ರ ಬಿಎಸ್ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಡಾ. ಧನಂಜಯ ಸರ್ಜಿ ಇದೀಗ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿದ್ದು, ಕೇಂದ್ರೀಯ ಚುನಾವಣೆ ಸಮಿತಿ ಧನಂಜಯ್ ಸರ್ಜಿ ಅವರ ಹೆಸರು ಘೋಷಣೆ ಮಾಡಿದ್ದು ಜೂನ್ 3ರಂದು ವಿಧಾನ ಪರಿಷತ್ ಚುನಾವಣೆ ನಡೆಯಲಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ.
Leave a Reply