ಶಿವಮೊಗ್ಗ : ಲೋಕಸಭಾ ಚುನಾವಣೆ ಬೆನ್ನಲ್ಲೇ ಈಗ ವಿಧಾನ ಪರಿಷತ್ ನ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ನಾಳೆ ಜೂನ್ 3ರಂದು ನಡೆಯಲಿದೆ
ಜೂನ್ 3ರ ಸೋಮವಾರ ಬೆಳಗ್ಗೆ 8ರಿಂದ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಜಿಲ್ಲೆಯಲ್ಲಿ ಒಟ್ಟು 38 ಮತ ಕೇಂದ್ರಗಳನ್ನ ತೆರೆಯಲಾಗಿದೆ. ಜಿಲ್ಲೆಯಲ್ಲಿ ಒಟ್ಟಾರೆ 27,412 ಮತದಾರರು ಇದ್ದಾರೆ
ಇನ್ನು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಜಿಲ್ಲೆಯಲ್ಲಿ 4365 ಮತದಾರರು ಇದ್ದು. 32 ಮತ ಕೇಂದ್ರಗಳನ್ನ ತೆರೆಯಲಾಗಿದೆ. ಮತದಾರರು ತಮ್ಮ ಮತ ಇರುವ ಕೇಂದ್ರಗಳಲ್ಲಿ ಮತದಾನ ಮಾಡಬಹುದು. ಇನ್ನು ಮತದಾನ ಮಾಡಲು ಚುನಾವಣಾ ಆಯೋಗ ಸೂಚಿಸಿರುವ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮತದಾನ ಮಾಡಬಹುದು
ಜೂನ್ ಮೂರರ ಸೋಮವಾರ ಬೆಳಗ್ಗೆ 8 ರಿಂದ 4 ಗಂಟೆವರೆಗೆ ನಡೆಯಲಿರುವ ಚುನಾವಣೆಗೆ. ಜೂನ್ 2 ಭಾನುವಾರ ಇಂದಿನಿಂದಲೇ ಬೆಳಗ್ಗೆ 10 ಗಂಟೆಯಿಂದಲೇ ಮಸ್ಟರಿಂಗ್ ಕಾರ್ಯ ಆರಂಭವಾಗಲಿದೆ.
ಜೂನ್ 3ರಂದು ಸಂಜೆ 4 ಗಂಟೆಗೆ ಮತದಾನ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಮತಪೆಟ್ಟಿಗೆಗಳನ್ನು ಮತ್ತು ಶಾಸನಬದ್ಧ ಲಕೋಟೆಗಳನ್ನು ಡಿಮಸ್ಟರಿಂಗ್ ಕೇಂದ್ರದಲ್ಲಿ ಕ್ರೋಢೀಕರಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಗೆ ತರಲಾಗುವುದು. ನಂತರ ಪೊಲೀಸ್ ಬೆಂಗಾವಲಿನಲ್ಲಿ ಮೈಸೂರು ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿಗೆ ಒಯ್ದು ಅಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಯಲ್ಲಿ ಮತಪೆಟ್ಟಿಗೆಗಳನ್ನು ಇರಿಸಲಾಗುತ್ತಿದೆ.
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಜೂನ್ 1ರಂದು ಸಂಜೆ 4 ಗಂಟೆಯಿಂದ ಜೂನ್ 3ರ ಮಧ್ಯಾಹ್ನ 4 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಇಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರು ದತ್ತ ಹೆಗಡೆ ಹೇಳಿದ್ದಾರೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply