ಲೋಕಸಭಾ ಫಲಿತಾಂಶದ ಬಳಿಕ ಗೀತಾ ಶಿವರಾಜ್ ಕುಮಾರ್ ಫಸ್ಟ್ ರಿಯಾಕ್ಷನ್ ! ಏನಂದ್ರು ಗೀತಕ್ಕ ?

ಬೆಂಗಳೂರು : ದೊಡ್ಮನೆ ಸೊಸೆ, ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗೀತಾ, ಪ್ರತಿ ಸ್ಪರ್ಧಿ ಬಿ.ವೈ ರಾಘವೇಂದ್ರ ಎದುರು ಸೋಲು ಒಪ್ಪಿಕೊಂಡಿದ್ದಾರೆ. ಈ ಬಾರಿ ಗೀತಾ ಗೆಲುವಿಗಾಗಿ ಸ್ಯಾಂಡಲ್ ವುಡ್ ನ ಅನೇಕ ನಟ ನಟಿಯರು ಪ್ರಚಾರ ಮಾಡಿದ್ದರು.ಆದರೆ, ಯಾವ ಪ್ರಚಾರವೂ ಅವರನ್ನು ಕೈ ಹಿಡಿಯಲಿಲ್ಲ.

ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಎಸ್​ ಯಡಿಯೂರಪ್ಪ ಪುತ್ರ ಬಿ.ವೈ ರಾಘವೇಂದ್ರ ಅವರ ಗೆಲುವಾಗಿದೆ. ಗೀತಾ ಶಿವರಾಜ್​ ಕುಮಾರ್ ಅವರ ಪರವಾಗಿ ನಟ ಶಿವರಾಜ್​ಕುಮಾರ್​ ಅವರು ನಿರಂತರವಾಗಿ ಪ್ರಚಾರ ಮಾಡಿದ್ದರು. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್‌ ಕುಮಾರ್ ಸಾಮಾಜಿಕ ಜಾಲತಾಣದ ಮೂಲಕ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.

‘ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ, ನಿಮ್ಮೊಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗು ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು’ ಎಂದು ಹೇಳಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 

ಇದನ್ನೂ ಓದಿ  : ಜೋಮೊಟೋ ಡೆಲವರಿ ಬಾಯ್ ಬಂಡಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಪಡೆದ ಮತಗಳೆಷ್ಟು ಗೊತ್ತಾ! ಗಮನ ಸೆಳೆದ ಬಂಟಿ !


Leave a Reply

Your email address will not be published.