BREAKING NEWS: ಶಾಸಕ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ !

STATE NEWS : ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ನಿನ್ನೆ ರಾತ್ರಿ ಕಿಡಿಗೇಡಿಗಳು ಚಿಕ್ಕಬಳ್ಳಾಪುರ ನಗರದ ಕಂದ ವಾರದಲ್ಲಿರುವ ಪ್ರದೀಪ್ ಈಶ್ವರ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮನೆಯ ಕಿಟಕಿ ಗಾಜುಗಳನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಗೆ ಜಯ ಹಿನ್ನೆಲೆ ಕಲ್ಲು ತೂರಾಟ ನಡೆಸಿದ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ನಗರ ಠಾಣೆ ಪೋಲೀಸರು ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಎಸ್. ಶಿವಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಮಂಜುನಾಥ ಹಾಗೂ ಸಿಬ್ಬಂದಿ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆಯ ಸಿಸಿಟಿವಿ ಪರಿಶೀಲನೆ ನಡೆಸಲಾಗಿದ್ದು ಮನೆಯಲ್ಲಿದ್ದ ಸಿಬ್ಬಂದಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ

ಇನ್ನು ಘಟನೆ ಸಂಬಂಧ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ ಅವರ ತಮ್ಮ ಚೇತನ್, ಲೋಕಸಭಾ ಚುನಾವಣೆಯಲ್ಲಿ ಡಾ.ಕೆ.ಸುಧಾಕರ್ ಗೆದ್ದ ಕಾರಣ ಅವರ ಬೆಂಬಲಿಗರೆ ಕೃತ್ಯ ಎಸಗಿದ್ದಾಗಿ ಶಂಕೆ ವ್ಯಕ್ತಪಡಿಸಿದ್ದಾರೆ.

ಶಾಸಕರಾದ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮನೆಯ ಸಿಬ್ಬಂದಿ ಮುನಿಕೃಷ್ಣ ಮಾಹಿತಿ ನೀಡಿದ್ದಾರೆ. ರಾತ್ರಿ 10.15 ಸಮಯದಲ್ಲಿ ನಾಲ್ಕು ಜನ ಹುಡುಗರು ಕಲ್ಲು ತೂರಾಟ ನಡೆಸಿದ್ದಾರೆ. ಸಿಸಿಟಿವಿ ಕ್ಯಾಮೆರಾ ಸೆನ್ಸರ್ ಆನ್ ಆಗ್ತಿದ್ದಂತೆ ಹುಡುಗರು ಓಡಿ ಹೋದರು. ನಾಲ್ಕೈದು ಕಲ್ಲುಗಳನ್ನು ಎಸೆದಿದ್ದಾರೆ. ಮನೆಯ ಕಿಟಕಿ ಪುಡಿ ಪುಡಿ ಆಗಿದೆ. ಕಲ್ಲಿನ ಶಬ್ದ ಕೇಳಿ ಆಚೆ ಬಂದೆವು ಭಯ ಆಯಿತು. ಅಭಿ, ತಾರಕ್ ನಾನು ರೂಮ್ ನಲ್ಲಿ ಇದ್ದೆವು. ಮನೆ ಮಾಡಿ ಒಂದು ವರ್ಷ ಆಗಿದೆ. ಇದೇ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆದಿರೋದು ಎಂದು ತಿಳಿಸಿದ್ದಾರೆ.

ವರದಿ : ಲಿಂಗರಾಜ್ ಗಾಡಿಕೊಪ್ಪ 

ಇದನ್ನೂ ಓದಿ  : ಲೋಕಸಭಾ ಫಲಿತಾಂಶದ ಬಳಿಕ ಗೀತಾ ಶಿವರಾಜ್ ಕುಮಾರ್ ಫಸ್ಟ್ ರಿಯಾಕ್ಷನ್ ! ಏನಂದ್ರು ಗೀತಕ್ಕ ?


Leave a Reply

Your email address will not be published.