ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತ ಮಾಯಣ್ಣ ಗೌಡ ವರ್ಗಾವಣೆಯಾಗಿದ್ದಾರೆ, ಕಳೆದ ಎರಡು ವರ್ಷದಿಂದ ಮಹಾನಗರ ಪಾಲಿಕೆಯಲ್ಲಿ ಉತ್ತಮ ಆಡಳಿತ ನಡಸಿದ್ದ ಮಾಯಣ್ಣ ಗೌಡರು ಈಗ ವರ್ಗಾವಣೆಯಾಗಿದ್ದಾರೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಅಧಿಸೂಚನೆ ಹೊರಡಿಸಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್, ಕೆಎಎಸ್(ಹಿರಿಯ ಶ್ರೇಣಿ) ಅಧಿಕಾರಿ, ವಿಶೇಷ ಭೂಸ್ವಾಧೀನಾಧಿಕಾರಿ, ಡಾ.ಶಿವರಾಮಕಾರಂತ ಬಡವಾಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಆಯುಕ್ತರು, ಶಿವಮೊಗ್ಗ ಮಹಾನಗರ ವಾಲಿಕೆ ಈ ಹುದ್ದೆಗೆ ವರ್ಗಾಯಿಸಿ ಆದೇಶಿಸಿದ್ದಾರೆ.
ಇನ್ನೂ ಈ ಆದೇಶದಿಂದ ಸ್ಥಳ ನಿರೀಕ್ಷೆಗೆ ಬರುವ ಅಧಿಕಾರಿಯು ಮುಂದಿನ ಸ್ಥಳ ನಿಯುಕ್ತಿಗಾಗಿ ತಮ್ಮ ಮಾತೃ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
ಇದನ್ನೂ ಓದಿ : ಕಾರುಗಳ ನಡುವೆ ಮುಖಾ-ಮುಖಿ ಡಿಕ್ಕಿ ! ಭದ್ರಾವತಿ ಯುವಕ ಸಾವು !
Leave a Reply