ಶಿವಮೊಗ್ಗ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಭೂಸ್ವಾಧೀನ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಕವಿತಾ ಯೋಗಪ್ಪನವರ್ ಇದೀಗ ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ವರ್ಗಾವಣೆಯಾಗಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಮಹಾನಗರ ಪಾಲಿಕೆಯ ಆಯುಕ್ತರಾಗಿ ಕೆಲಸ ಮಾಡಿದ್ದ ಮಾಯಣ್ಣ ಗೌಡ ನೂತನ ಪಾಲಿಕೆ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕವಿತಾ ಯೋಗಣ್ಣನವರಿಗೆ ಹೂವಿನ ಬೊಕ್ಕೆ ಕೊಟ್ಟು ಸ್ವಾಗತಿಸಿದ್ದಾರೆ.
ಸುಮಾರು ಎರಡು ವರ್ಷಗಳ ಕಾಲ ಪಾಲಿಕೆಯ ಆಯುಕ್ತರಾಗಿ ಕೆಲಸ ನಿರ್ವಹಿಸಿದ್ದ ಮಾಯಣ್ಣ ಗೌಡ ಶಿವಮೊಗ್ಗ ಸ್ಮಾರ್ಟ್ ಸಿಟಿಯ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಕೆಲಸ ನಿರ್ವಹಿಸಿದ್ದರು, ಮುಂದಿನ ಸ್ಥಳ ನಿಯುಕ್ತಿಗಾಗಿ ಅವರನ್ನ ತಮ್ಮ ಮಾತು ಇಲಾಖೆಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಇದೀಗ ಇವರ ಸ್ಥಾನಕ್ಕೆ ಕವಿತಾ ಯೋಗಪ್ಪನವರ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply