ಶಿವಮೊಗ್ಗ : ತಾಲೂಕಿನ ಮುದ್ದಿನಕೊಪ್ಪದ ಟೈಗರ್ ಅಂಡ್ ಲಯನ್ ಸಫಾರಿ ಬಳಿ ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇನ್ನೋವಾ ಹಾಗೂ ಸ್ವಿಫ್ಟ್ ಕಾರಿನ ನಡುವೆ ಮುಖಾ – ಮುಖಿ ಡಿಕ್ಕಿ ನಡೆದಿದ್ದು, ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಇನ್ಹೋವಾ ಕಾರು ಹಾಗೂ ಆಯನೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿದಿದ್ದು, ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಕೆಲವರಿಗೆ ಗಾಯಗಳಾಗಿದ್ದು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಸಿಲಾಗಿದೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply