ಶಿವಮೊಗ್ಗ : ನಗರದ ಅಲ್ಕೊಳದ ಸಮೀಪ ಇರುವ ಭಾರತೀಯ ಆಹಾರ ನಿಗಮದ ಕಚೇರಿಯ ಮುಂಭಾಗದ ವಿದ್ಯುತ್ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಅವಘಡದ ನಂತರ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ, ಕಾರಿನಲ್ಲಿದವರಿಗೂ ಯಾವುದೇ ತೊಂದರೆಯಾಗಿಲ್ಲ
ಕಾರಿನಲ್ಲಿದ್ದವರಿಗೆ ಯಾವುದೇ ತೊಂದರೆಯಾಗಿಲ್ಲ. ಅನಾಹುತದಿಂದ ಪಾರಾಗಿದ್ದಾರೆ. ಅವಘಡದ ನಂತರ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸಂಭಾವ್ಯ ಅನಾಹುತವೊಂದು ತಪ್ಪಿದಂತಾಗಿದೆ ಎಂದು ಸ್ಥಳೀಯ ನಿವಾಸಿಗಳು ಮಾಹಿತಿ ನೀಡಿದ್ದಾರೆ.
ವಿದ್ಯುತ್ ಕಂಬ ರಸ್ತೆಗೆ ವಾಲಿಕೊಂಡಿರುವುದರಿಂದ, ಸದರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು ಮತ್ತೊಂದು ರಸ್ತೆಯ ಮೂಲಕ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ಸಂಚಾರಿ ಠಾಣೆ ಪೊಲೀಸರು ಹಾಗು ಮೆಸ್ಕಾಂ ಆಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ವರದಿ : ಲಿಂಗರಾಜ್ ಗಾಡಿಕೊಪ್ಪ




Leave a Reply