ಶಿವಮೊಗ್ಗ : ದೇಶಾದ್ಯಂತ ಇಂದು 78 ನೇ ಸ್ವಾತಂತ್ರ್ಯೋತ್ಸವದ ( 78th independence day ) ಸಂಭ್ರಮ ಮನೆ ಮಾಡಿದ್ದು, ಇಂದು ಶಿವಮೊಗ್ಗ (shivamogga) ಜಿಲ್ಲಾಡಳಿತದ ವತಿಯಿಂದ ಡಿಎಆರ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಧ್ವಜಾರೋಹಣ ನೆರವೇರಿಸಿ. ಜನತೆಗೆ 78ನೇ ಸ್ವಾತಂತ್ರ್ಯೋತ್ಸವದ ಶುಭಾಶಯವನ್ನು ಕೋರಿದರು.
ಧ್ವಜಾರೋಹಣದ ಮೂಲಕ ಸ್ವಾತಂತ್ರ್ಯೋತ್ಸವಕ್ಕೆ ಚಾಲನೆ ನೀಡಿದ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನಂತರ ತೆರೆದ ಜೀಪಿನಲ್ಲಿ 26 ತುಕುಡಿಗಳನ್ನು ಪರಿಶೀಲಿಸಿ ವಂದನೆಗೆ ಗೌರವ ವಂದನೆ ಸ್ವೀಕರಿಸಿದರು. ಕೆ.ಎಸ್.ಆರ್.ಪಿ, ಡಿ. ಎ ಆರ್, ಗೃಹ ರಕ್ಷಕ ದಳ, ಅಗ್ನಿಶಾಮಕ ದಳ, ಅರಣ್ಯ ಇಲಾಖೆ, ಎನ್.ಸಿ.ಸಿ ವಿದ್ಯಾರ್ಥಿಗಳು, ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲೆಯ ವಿವಿಧ ಶಾಲೆಯ ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವರಿಗೆ ಗೌರವ ವಂದನೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಅವರು ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಾಯ್ ಪಟೇಲ್, ಸುಭಾಷ್ ಚಂದ್ರ ಬೋಸ್, ಕಿತ್ತೂರು ರಾಣಿ ಚೆನ್ನಮ್ಮ ಸಂಗೊಳ್ಳಿ ರಾಯಣ್ಣ, ಇಂತಹ ನೂರಾರು ವೀರ ಸೇನಾನಿಗಳ ಪರಿಶ್ರಮದ ಫಲ ಇಂದಿನ ಸ್ವತಂತ್ರ ದಿನಾಚರಣೆ.ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಐವರು ವೀರಸೇನಾನಿಗಳು ನೇಣಿಗೆ ಶರಣಾಗಿ ಹುತಾತ್ಮರಾಗಿದ್ದು ನಿಜಕ್ಕೂ ನೋವಿನ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿ ಈ ಜಿಲ್ಲೆ ಅನೇಕ ಹೋರಾಟಗಾರರಿಗೆ ಜನ್ಮ ನೀಡಿದೆ. ರಾಜ್ಯದ ರಾಜಕೀಯ ಕ್ಷೇತ್ರದಲ್ಲಿ ಪೂಜ್ಯ ತಂದೆಯವರಾದ ಶ್ರೀ ಎಸ್.ಬಂಗಾರಪ್ಪನವರು ಸೇರಿದಂತೆ ನಾಲ್ಕು ಜನ ಮುಖ್ಯಮಂತ್ರಿಗಳನ್ನು ನೀಡಿದ್ದು, ಅನೇಕ ಕ್ಷೇತ್ರಗಳಲ್ಲಿನ ಅಸಂಖ್ಯಾತ ಪ್ರತಿಭಾವಂತರು, ಪ್ರಸಿದ್ದರು, ಉದಯಿಸಿದ ಪುಣ್ಯಭೂಮಿ ಶಿವಮೊಗ್ಗ ಜಿಲ್ಲೆ ಎಂದರು.
12 ಸಾವಿರ ಶಿಕ್ಷಕರನ್ನ ನೇಮಿಸಲಾಗಿದೆ ಖಾಲಿ ಇರುವ 10 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು.98 ಎಕರೆಯಲ್ಲಿ ಸೋಗಾನೆಯಲ್ಲಿ ಫುಡ್ ಪಾರ್ಕ್, ಚಂದ್ರಗುತ್ತಿ ಮತ್ತು ಆನವಟ್ಟಿಯಲ್ಲಿ ಶುದ್ಧ ಕುಡಿಯುವ ನೀರು ನೀಡಲು ಯೋಜಿಸಲಾಗಿದೆ. ಕಿದ್ವಾಯಿ ಆಸ್ಪತ್ರೆ ಪ್ರಗತಿಯಲ್ಲಿದೆ. ಮೆಗ್ಗಾನ್ ನಲ್ಲಿ ಮೆದುಳು ರೋಗಕ್ಕೆ ಚಿಕಿತ್ಸೆ ಕುರಿತು ಜನವರಿಯಿಂದ ಆರಂಭಿಸಲಾಗುವುದು ಎಂದು ತಿಳಿಸಿದರು.
ನಂತರ ವಿವಿಧ ತುಕಡಿಗಳು, ವಿವಿಧ ಶಾಲೆಯ ಮಕ್ಕಳು ಪದಸಂಚಲನದಲ್ಲಿ ಭಾಗಿಯಾಗಿದ್ದರು.ಪಥಸಂಚಲನದಲ್ಲಿ ಪ್ರಥಮ ಸ್ಥಾನ ಮೊರಾರ್ಜಿ ವಸತಿ ಶಾಲೆ, ದ್ವಿತೀಯ ಸ್ಥಾನ ಭಾರತ್ ಸ್ಕೌಟ್ಸ್ ಬಾಲಕರ ಶಾಲೆ ಹಾಗೂ ತೃತೀಯ ಸ್ಥಾನವನ್ನು ಜ್ಞಾನದೀಪ ಶಾಲೆ ವಿದ್ಯಾರ್ಥಿಗಳು ಪಡೆದುಕೊಂಡರು. ಉತ್ತಮ ಸೇವೆ ಸಲ್ಲಿಸಿದ ೫ ಜನ ಅಧಿಕಾರಿ/ಸಿಬ್ಬಂದಿಗಳು, ಅಲ್ಪಸಂಖ್ಯಾತ ಇಲಾಖೆಯ ಅಡಿ ಬರುವ ಪ್ರೌಢಶಾಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಅಂಗಾಂಗ ದಾನ ಮಾಡಿದ ದಿ.ಉಲ್ಲಾಸ್ , ದಿ.ಲಲಿತಮ್ಮ ಕುಟುಂಬ ಇವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್. ಚನ್ನಬಸಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಿಎಸ್ ಅರುಣ್, ಡಾ. ಧನಂಜಯ ಸರ್ಜಿ, ಬಲ್ಕಿಸ್ ಬಾನು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ, ಗ್ಯಾರೆಂಟಿ ಸಮಿತಿಯ ಜಿಲ್ಲಾಅ ಧ್ಯಕ್ಚ ಚಂದ್ರಭೂಪಾಲ್ ಮತ್ತು ಕಲಗೋಡು ರತ್ನಾಕರ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ಮೊದಲಾದವರು ಉಪಸ್ಥಿತರಿದ್ದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply