ಶಿವಮೊಗ್ಗ : ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವಂತಹ ಚುಂಚಾದ್ರಿ ಕಪ್ ವಾಲಿಬಾಲ್ ಕ್ರೀಡಾಕೂಟದ ಸಮಾರೋಪ ಸಮಾರಂಭಕ್ಕೆ ಆಗಮಿಸಿದಂತಹ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರು ಅಧಿಕಾರಿಗಳ ಮೇಲೆ ಗರಂ ಆಗಿರುವ ಘಟನೆ ನಿನ್ನೆ ಸಂಜೆ ನಡೆದಿದೆ.
ಉಸ್ತುವಾರಿ ಸಚಿವರು ಬರುವ ಮಾಹಿತಿಯನ್ನ ತಿಳಿದು ಸ್ಥಳದಲ್ಲಿ ನಡೆದಿದ್ದ ಸಾರ್ವಜನಿಕರು ಮತ್ತು ಕ್ರೀಡಾಪಟುಗಳು ಮಧು ಬಂಗಾರಪ್ಪನವರಿಗೆ ಕ್ರೀಡಾಂಗಣದ ಅವ್ಯವಸ್ಥೆ ಕುರಿತು ದೂರು ನೀಡಿದ್ದಾರೆ. ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಕೇಳಿದರೆ ಕ್ರೀಡಾ ಇಲಾಖೆ ಅಧಿಕಾರಿಗಳು ಉಡಾಫೆ ಉತ್ತರ ಕೊಡುತ್ತಾರೆ. ನೀವು (ಸಚಿವರು) ಇಲ್ಲಿನ ಬರುತ್ತಿರುವ ಕಾರಣ ಈಗ ನೀರಿನ ವ್ಯವಸ್ಥೆ ಮಾಡಿದ್ದಾರೆ ಎಂದು ಕ್ರೀಡಾಪಟುಗಳು ಸಚಿವರ ಗಮನ ಸೆಳೆದಿದ್ದಾರೆ.
ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಕ್ರೀಡಾ ಸಹಾಯಕ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ. ಕ್ರೀಡಾ ಇಲಾಖೆ ಅಧಿಕಾರಿಗಳಿಗೆ ತೀವ್ರ ತರಾಟೆ ತೆಗೆದುಕೊಂಡರು.ಕ್ರೀಡಾಪಟುಗಳಿಗೆ ಯಾವುದೇ ತೊಂದರೆ ಆಗದಂತೆ ತಕ್ಷಣ ಅಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲು ಕ್ರಮ ವಹಿಸುವಂತೆ ತಾಕೀತು ಮಾಡಿದರು.
ಸ್ಮಾರ್ಟ್ ಸಿಟಿ ಯೋಜನೆಯಡಿ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಕಟ್ಟಡ, ನೀರಿನ ಟ್ಯಾಂಕ್, ವಾಕಿಂಗ್ ಪಾಥ್ ಸೇರಿದಂತೆ ಎಲ್ಲ ಕಾಮಗಾರಿಯೂ ಕಳಪೆಯಾಗಿವೆ. ನೀರಿನ ಟ್ಯಾಂಕ್ ಸೋರುತ್ತಿದೆ ಎಂದು ಸಾರ್ವಜನಿಕರು ದೂರಿದರು. ಇದರಿಂದ ಕುಪಿತಗೊಂಡ ಮಧು ಬಂಗಾರಪ್ಪ, ಆಗಸ್ಟ್ 16ರಂದು ನಡೆಯಲಿರುವ ಮಹಾನಗರ ಪಾಲಿಕೆ ಸಭೆಗೆ ಸಂಪೂರ್ಣ ಮಾಹಿತಿಯೊಂದಿಗೆ ಹಾಗೂ ಕಳಪೆ ಕಾಮಗಾರಿಯ ಪಟ್ಟಿಯೊಂದಿಗೆ ಬರುವಂತೆ ಅಧಿಕಾರಿಗಳಿಗೆ ಹೇಳಿದರು.
ವರದಿ : ಲಿಂಗರಾಜ್ ಗಾಡಿಕೊಪ್ಪ
Leave a Reply