ಹೊಸನಗರ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ತೋಟದಕೊಪ್ಪ ಗ್ರಾಮದ ವಿಜಾಪುರ ಎಂಬಲ್ಲಿ ಅಮಾನವೀಯ ಘಟನೆಯೊಂದು ವರದಿಯಾಗಿದೆ. ಮೇಯಲು ಬಿಟ್ಟಿದ್ದ ಹಸುವೊಂದರ ಕೆಚ್ಚಲನ್ನು ದುಷ್ಕರ್ಮಿಗಳು ಕತ್ತರಿಸಿ ವಿಕೃತಿ ಮೆರೆದಿದ್ದಾರೆ.
ಹಸುವಿನ ಮಾಲೀಕ ನವೀನ್ ಅವರು ಹೊಸನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ. ಎಂದಿನಂತೆ ತಮ್ಮ ದನಗಳನ್ನು ಮೇಯಲು ಬಿಡಲಾಗಿತ್ತು. ಶನಿವಾರ ಸಂಜೆ 4:30ರ ಸುಮಾರಿಗೆ ಊರಿನ ಜನರು ನವೀನ್ ಅವರಿಗೆ ಕರೆ ಮಾಡಿ, ಅವರ ದನದ ಕೆಚ್ಚಲಿನಲ್ಲಿ ರಕ್ತ ಸೋರುತ್ತಿರುವ ಬಗ್ಗೆ ತಿಳಿಸಿದ್ದಾರೆ.
ಇದನ್ನು ಓದಿ : ಸೊರಬ ಠಾಣಾ ವ್ಯಾಪ್ತಿಯಲ್ಲಿ ಮರ್ಯಾದಾ ಹತ್ಯೆ ಪ್ರಕರಣ! ತಂದೆಯಿಂದಲೇ ಮಗಳ ಹತ್ಯೆಗೆ ಯತ್ನ; ತಂದೆ ಬಂಧನ! ಏನಿದು ಪ್ರಕರಣ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್. ಪೂರ್ತಿ ಓದಲು ಕೆಳಗಿರುವ ಲಿಂಕ್ ಕ್ಲಿಕ್ ಮಾಡಿ
ಸ್ಥಳಕ್ಕೆ ತಕ್ಷಣ ಧಾವಿಸಿದಾಗ, 9 ವರ್ಷ ಪ್ರಾಯದ, ಕರು ಹಾಕಿದ್ದ ಮಲೆನಾಡು ಗಿಡ್ಡ ತಳಿಯ ಹಸುವಿನ ಕೆಚ್ಚಲಿನಿಂದ ರಕ್ತ ಸೋರುತ್ತಿರುವುದು ಕಂಡುಬಂದಿದೆ. ಯಾರೋ ಕೆಚ್ಚಲನ್ನು ಕೊಯ್ದಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಲಾಗಿದೆ. ನಂತರ ಗ್ರಾಮಸ್ಥರ ಸಹಾಯದಿಂದ ಹಸುವನ್ನು ಮನೆಗೆ ಕರೆತಂದು ಪಶು ವೈದ್ಯರಿಂದ ಹೊಲಿಗೆ ಹಾಕಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಈ ಅಮಾನವೀಯ ಕೃತ್ಯ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನವೀನ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
WhatsApp Number : 7795829207
Leave a Reply