ಆನಂದಪುರ: ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ!

ಆನಂದಪುರ : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಅಮಾನುಷ ಘಟನೆಯೊಂದು ಬೆಳಕಿಗೆ ಬಂದಿದೆ. ವೃದ್ಧೆಯೊಬ್ಬರನ್ನು ಕಂಬಕ್ಕೆ ಕಟ್ಟಿ ನಿರ್ದಯವಾಗಿ ಹಲ್ಲೆ ಮಾಡಲಾಗಿದೆ.

ಇದನ್ನು ಓದಿ : ಯೂನಿಯನ್ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ: 7ನೇ ತರಗತಿಯಿಂದ ಪದವೀಧರರಿಗೆ ಅವಕಾಶ! ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಸಂಪೂರ್ಣ ಮಾಹಿತಿ…

ಕಸ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ

ಗೌತಮಪುರ ಗ್ರಾಮದ 67 ವರ್ಷದ ಹುಚ್ಚಮ್ಮ ಕೊಲ್ಲಪ್ಪ ಎಂಬುವರು ತಮ್ಮ ಮನೆಯ ಜಾಗದಲ್ಲಿ ಪಕ್ಕದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದ ಪ್ರೇಮ ಎಂಬುವವರು ಕಸ ಹಾಕಿದ್ದನ್ನು ಪ್ರಶ್ನಿಸಿದ್ದಾರೆ. “ಇಲ್ಲಿ ಕಸ ಹಾಕಬೇಡಿ” ಎಂದು ಹೇಳಿದ್ದಕ್ಕೆ, ಪ್ರೇಮ ಮತ್ತು ಅವರ ಮನೆಯ ಸದಸ್ಯರೆಲ್ಲರೂ ಸೇರಿಕೊಂಡು ವೃದ್ಧೆ ಹುಚ್ಚಮ್ಮ ಅವರಿಗೆ ಕೆಟ್ಟದಾಗಿ ಬೈದಿದ್ದಾರೆ ಎನ್ನಲಾಗಿದೆ.

ಜಾಹಿರಾತು:

ಮನೆಯಿಂದ ಎಳೆದು ಕಂಬಕ್ಕೆ ಕಟ್ಟಿ ಹಲ್ಲೆ

ಬಳಿಕ, ವೃದ್ಧೆ ಹುಚ್ಚಮ್ಮ ಅವರನ್ನು ಮನೆಯಿಂದ ಎಳೆದುಕೊಂಡು ಹೋಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ಮಾಡಿದ್ದಾರೆ. ಈ ಘಟನೆಯು ಆನಂದಪುರ ಸುತ್ತಮುತ್ತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಈ ಅಮಾನವೀಯ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆನಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಈ ಘಟನೆ ಮಾನವೀಯತೆಗೆ ಕಳಂಕ ತಂದಿದೆ ಎಂದು ಸ್ಥಳೀಯರು ವ್ಯಾಪಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ : ಹೊಸನಗರ: ಮೇಯಲು ಬಿಟ್ಟ ಹಸುವಿನ ಕೆಚ್ಚಲು ಕೊಯ್ದ ದುಷ್ಕರ್ಮಿಗಳು!! ಏನಿದು ಪ್ರಕರಣ?  ಪೂರ್ತಿ ಓದಲು ಕೆಳಗಿರುವ ಕ್ಲಿಕ್ ಮಾಡಿ

 

WhatsApp Number : 7795829207


Leave a Reply

Your email address will not be published.