ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಎ ಎ ವೃತ್ತದಲ್ಲಿ ಮಿನಿ ಬಸ್ ಪಲ್ಟಿ! ಭಾರಿ ಅನಾಹುತ ತಪ್ಪಿದ ಸನ್ನಿವೇಶ

ಶಿವಮೊಗ್ಗ: ಶಿವಮೊಗ್ಗದ ಹೃದಯಭಾಗವಾದ ಅಮೀ‌ರ್ ಅಹಮದ್ ಸರ್ಕಲ್‌ನಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಬಹುದಾದ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ರಸ್ತೆ ಮಧ್ಯೆ ಪಲ್ಟಿಯಾಗಿದೆ.

ಘಟನೆ ನಡೆದಾಗ ಬಸ್‌ನಲ್ಲಿ ಚಾಲಕನೊಬ್ಬರೇ ಇದ್ದು, ಯಾವುದೇ ಪ್ರಯಾಣಿಕರು ಇರಲಿಲ್ಲ. ಎ.ಎ. ಸರ್ಕಲ್ ಬಳಿ ಬಸ್ ಬರುತ್ತಿದ್ದಾಗ, ಇದ್ದಕ್ಕಿದ್ದಂತೆ ಒಂದು ಆಟೋ ಅಡ್ಡ ಬಂದಿದೆ. ಈ ಆಟೋವನ್ನು ತಪ್ಪಿಸಲು ಹೋದ ಚಾಲಕನ ನಿಯಂತ್ರಣ ತಪ್ಪಿ, ಬಸ್ ಪಲ್ಟಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಪ್ರಯಾಣಿಕರು ಇಲ್ಲದ ಕಾರಣ ಯಾವುದೇ ದೊಡ್ಡ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳು ಸಂಭವಿಸಿಲ್ಲ. ಈ ಘಟನೆ ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಂತಹ ಘಟನೆಗಳನ್ನು ತಪ್ಪಿಸಲು ಸಾರ್ವಜನಿಕರು ಹಾಗೂ ವಾಹನ ಚಾಲಕರು ರಸ್ತೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ಮನವಿ ಮಾಡುತ್ತದೆ.

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!   ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ

WhatsApp Number : 7795829207


Leave a Reply

Your email address will not be published.