ರಿಪ್ಪನ್‌ಪೇಟೆ: ಬೈಕ್‌ಗಳ ಮುಖಾಮುಖಿ ಡಿಕ್ಕಿ; ಪ್ರಭಾರ ಮುಖ್ಯಶಿಕ್ಷಕ ಮಂಜಯ್ಯ ದುರ್ಮರಣ

ರಿಪ್ಪನ್‌ಪೇಟೆ: ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೋಟೆತಾರಿಗ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಮಂಜಯ್ಯ ಟಿ (59) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ಮಂಜಯ್ಯ ಟಿ ಅವರು ಮೂಲತಃ ಹರಮಘಟ್ಟದವರಾಗಿದ್ದು, ಅರಸಾಳುವಿನಲ್ಲಿ ವಾಸವಾಗಿದ್ದರು. ಕೊಟೇತಾರಿಗ ಶಾಲೆಯಲ್ಲಿ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದರು.

ಘಟನೆ ನಡೆದಿದ್ದು ಹೀಗೆ:

ಕರ್ತವ್ಯ ಮುಗಿಸಿ ತಮ್ಮ ಟಿವಿಎಸ್ ಸ್ಟಾರ್ ಸಿಟಿ ಬೈಕ್ (KA14Z6775) ನಲ್ಲಿ ಅರಸಾಳು ಕಡೆಗೆ ತೆರಳುತ್ತಿದ್ದ ಮಂಜಯ್ಯ ಅವರಿಗೆ ಎದುರಿನಿಂದ ಬಂದ ಹಿರೋ ಹೋಂಡಾ ಸ್ಪೆಂಡರ್ (KA15V0159) ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮಂಜಯ್ಯ ಅವರು ಬೈಕ್‌ನಿಂದ ಕೆಳಗೆ ಬಿದ್ದು, ತಲೆಗೆ ಗಂಭೀರ ಗಾಯಗಳಾಗಿ ತೀವ್ರ ರಕ್ತಸ್ರಾವವಾಗಿತ್ತು.

ಇದನ್ನು ಓದಿ: ನಾಳೆ ಭಾರತ್ ಬಂದ್: ಶಿವಮೊಗ್ಗದಲ್ಲೂ ಬಂದ್ ಬಿಸಿ! ಯಾವ ಸೇವೆಗಳು ಬಂದ್? ಯಾವುದಕ್ಕೆ ವಿನಾಯಿತಿ? ಇಲ್ಲಿದೆ ಸಂಪೂರ್ಣ ಮಾಹಿತಿ

ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮೊದಲೇ ಮಂಜಯ್ಯ ಅವರು ಕೊನೆಯುಸಿರೆಳೆದಿದ್ದರು. ಇನ್ನೊಂದು ಬೈಕ್‌ನಲ್ಲಿದ್ದ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ರಾಜುರೆಡ್ಡಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!   ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ

ಜಾಹಿರಾತು:

WhatsApp Number : 7795829207


Leave a Reply

Your email address will not be published.