ಶಿವಮೊಗ್ಗದಲ್ಲಿ ಆತಂಕ: ಚಲಿಸುತ್ತಿದ್ದ ಕಾರಿಗೆ ಬೆಂಕಿ, ಅಗ್ನಿಗೆ ಆಹುತಿ!

ಶಿವಮೊಗ್ಗ: ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಸಿಂಹಧಾಮದ ಬಳಿ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದವರು ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದಾರೆ. ಆದರೆ, ನೋಡ ನೋಡುತ್ತಿದ್ದಂತೆಯೇ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ನಿನ್ನೆ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಮಲವಗೊಪ್ಪದ ನಿವಾಸಿ ವೀರೇಶ್ ಎಂಬುವರಿಗೆ ಸೇರಿದ ಐ20 ಕಾರು, ಸಿಂಹಧಾಮದ ಬಳಿ ಬರುತ್ತಿದ್ದಾಗ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಕಾರಿನ ಬಾನೆಟ್ ತೆಗೆಯಲು ಸಾಧ್ಯವಾಗದ ಕಾರಣ ಬೆಂಕಿ ಇಡೀ ಕಾರನ್ನು ವ್ಯಾಪಿಸಿದೆ.

ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ

ಮಾಹಿತಿ ತಿಳಿದ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಅಗ್ನಿಶಾಮಕ ದಳಕ್ಕೆ ತಿಳಿಸಲಾಯಿತು. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರಾದರೂ, ಅಷ್ಟರಲ್ಲಾಗಲೇ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು.

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!   ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ

ವೀರೇಶ್ ಅವರು ತಮ್ಮ ಹರ್ಷ ಫಾರಂಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ..

ಇದನ್ನು ಓದಿ: ಶಿವಮೊಗ್ಗದಲ್ಲಿ ವಾಟ್ಸಾಪ್ ಮೆಸೇಜ್ ಮೂಲಕ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಕಳವು!!

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.