ಶಿವಮೊಗ್ಗ; ಗುರು ಪೂರ್ಣಿಮೆಯ ಪವಿತ್ರ ಸಂದರ್ಭದಲ್ಲಿ, ಮಲೆನಾಡು ಮಠಾಧೀಶರ ಪರಿಷತ್ನ ಅಧ್ಯಕ್ಷರಾದ ಪರಮಪೂಜ್ಯ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರನ್ನು ಹಲವು ಪ್ರಮುಖ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೇಟಿ ಮಾಡಿ ಆಶೀರ್ವಾದ ಪಡೆದರು.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ವಿಧಾನ ಪರಿಷತ್ ಶಾಸಕ ಶ್ರೀ ಡಿ.ಎಸ್. ಅರುಣ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಶ್ರೀ ಕೆ.ಎನ್. ಜಗದೀಶ್, ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಸದಸ್ಯ ಹಾಗೂ ಯುವ ಮುಖಂಡ ಶ್ರೀ ಚಂದನ್ (ಚಂದು), ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್ ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯ ಪ್ರಭಾಕರ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದನ್ನು ಓದಿ: ಸಾಗರದಲ್ಲಿ “ನೈತಿಕ ಪೊಲೀಸ್ ಗಿರಿ” ದರ್ಪ: ನಾಗರಿಕ ಸ್ವಾತಂತ್ರ್ಯದ ಮೇಲೆ ದಾಳಿ! ಮೂವರು ಸೆರೆ, ಪೊಲೀಸರ ಸ್ಪಷ್ಟ ಸಂದೇಶ
ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್ಪ್ರೆಸ್ನ್ಯೂಸ್ ವಿಶೇಷ ವರದಿ! ಪೂರ್ತಿ ಓದಲು ಲಿಂಕ್ ಕ್ಲಿಕ್ ಮಾಡಿ
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಿ.ಎಸ್. ಅರುಣ್
ಗುರು ಪೂರ್ಣಿಮೆಯು ಭಾರತೀಯ ಸಂಸ್ಕೃತಿಯಲ್ಲಿ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ಮತ್ತು ಅವರನ್ನು ಗೌರವಿಸುವ ವಿಶೇಷ ದಿನವಾಗಿದೆ ಎಂದು ತಿಳಿಸಿದರು. ಈ ದಿನವನ್ನು ವೇದ ವ್ಯಾಸರ ಜನ್ಮದಿನದ ಸ್ಮರಣಾರ್ಥವಾಗಿ ಆಚರಿಸಲಾಗುತ್ತದೆ ಎಂದ ಅವರು, ಗುರುಗಳು ನಮ್ಮ ಜೀವನದಲ್ಲಿ ಜ್ಞಾನದ ಬೆಳಕನ್ನು ತಂದು, ಅಜ್ಞಾನದ ಕತ್ತಲೆಯನ್ನು ದೂರ ಮಾಡುತ್ತಾರೆ ಎಂದು ಹೇಳಿದರು. ಗುರುಗಳು ಕೇವಲ ಶಿಕ್ಷಣ ನೀಡುವುದಲ್ಲದೆ, ಜೀವನದ ಸರಿಯಾದ ಮಾರ್ಗವನ್ನು ತೋರಿಸಿ, ನಮ್ಮನ್ನು ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುತ್ತಾರೆ. ಗುರುಗಳಿಲ್ಲದೆ ಜೀವನದಲ್ಲಿ ಯಶಸ್ಸು ಮತ್ತು ಶಾಂತಿ ಸಾಧಿಸುವುದು ಕಷ್ಟ. ಆದ್ದರಿಂದ, ಈ ಶುಭ ದಿನದಂದು ಗುರುಗಳಿಗೆ ನಮಿಸುವ ಮೂಲಕ ಸಮಾಜದಲ್ಲಿ ಸದ್ಭಾವನೆ ಮತ್ತು ಸಜ್ಜನಿಕೆ ನೆಲೆಸಲಿ ಎಂದು ಶಾಸಕ ಅರುಣ್ ಹೇಳಿದರು.
ಇದನ್ನು ಓದಿ: ಶಿವಮೊಗ್ಗದಲ್ಲಿ ವಾಟ್ಸಾಪ್ ಮೆಸೇಜ್ ಮೂಲಕ ಸೈಬರ್ ವಂಚನೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಕಳವು!!
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply