ಯುವ ಸಮುದಾಯಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಆಶಾಕಿರಣ: ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅಭಿಮತ! 🌟

ಶಿವಮೊಗ್ಗ; ಯುವ ಸಮುದಾಯದಲ್ಲಿ ಶಿಸ್ತು, ಶ್ರದ್ಧೆ, ಆತ್ಮವಿಶ್ವಾಸ, ಪ್ರಾಮಾಣಿಕತೆ ಮತ್ತು ದೇಶಪ್ರೇಮ ದಂತಹ ಆದರ್ಶ ಗುಣಗಳನ್ನು ಬಿತ್ತುವಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ ಹೆಗಡೆ ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಇಂದು ತಮ್ಮ ಕಚೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ದೈಹಿಕ ಹಾಗೂ ಮಾನಸಿಕ ಸದೃಢತೆ ಜೊತೆಗೆ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸ್ಕೌಟ್ಸ್ ಮತ್ತು ಗೈಡ್ಸ್ ಉತ್ತಮ ವೇದಿಕೆಯಾಗಿದೆ ಎಂದರು. ವಿದ್ಯಾರ್ಥಿಗಳು ಮತ್ತು ಯುವ ಸಮುದಾಯ ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹೇಮಂತ್ ಎನ್ ಅವರು, ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮ, ಆಧ್ಯಾತ್ಮಿಕ ಕೌಶಲ್ಯ ಹಾಗೂ ದೇಶಪ್ರೇಮ ವನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿಯಾಗಿದೆ ಎಂದು ನುಡಿದರು. ಪರೀಕ್ಷಾರ್ಥ ಐಎಎಸ್ ಅಧಿಕಾರಿ ನಾಗೇಂದ್ರ ಬಾಬು ಉಪಸ್ಥಿತರಿದ್ದರು.

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಪ್ರಧಾನ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಅವರು, ಕರ್ನಾಟಕ ರಾಜ್ಯ ಸಂಸ್ಥೆಯ ಆದೇಶದ ಮೇರೆಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರಯ್ಯ, ಸಹ ಕಾರ್ಯದರ್ಶಿ ವೈ.ಆರ್. ವೀರೇಶಪ್ಪ, ಸ್ಕೌಟ್ಸ್ ಆಯುಕ್ತರಾದ ಎಸ್.ಜಿ. ಆನಂದ್, ಕೇಂದ್ರ ಸ್ಥಾನಿಕ ಆಯುಕ್ತರಾದ ಜಿ. ವಿಜಯಕುಮಾರ್, ರಾಜ್ಯ ಸಂಘಟನಾ ಆಯುಕ್ತರಾದ ಸುಮನ್ ಶೇಖರ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಇಂತಹ ಸಂಸ್ಥೆಗಳು ಸಮಾಜಕ್ಕೆ ಹೆಚ್ಚು ಬೇಕಲ್ಲವೇ? ನಿಮ್ಮ ಅನಿಸಿಕೆಗಳನ್ನು ಕಮೆಂಟ್ ಮಾಡಿ ತಿಳಿಸಿ.

ಇದನ್ನು ಓದಿ: ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱 

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.