ಶಿವಮೊಗ್ಗ: ಜಿಲ್ಲೆಯಾದ್ಯಂತ ಇರುವ ನೂರಾರು ಸುಂದರ ಪ್ರವಾಸಿ ಸ್ಥಳಗಳ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಡಿ.ಎಂ. ಶಂಕರಪ್ಪ ಅವರು ಹೇಳಿದ್ದಾರೆ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ವೇದಿಕೆ ಆಯೋಜಿಸಿದ್ದ ಒಂದು ದಿನದ ಪ್ರವಾಸಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 12ನೇ ಶತಮಾನದ ಶರಣರ ನಾಡು ನಮ್ಮ ಶಿವಮೊಗ್ಗ ಜಿಲ್ಲೆ. ವಿಶೇಷವಾಗಿ ಶಿಕಾರಿಪುರ ತಾಲ್ಲೂಕಿನಲ್ಲಿ ಹಲವು ಶರಣರ ನೆಲೆಯಿದೆ. ಜಿಲ್ಲೆಯ ಪ್ರತಿಯೊಬ್ಬರಿಗೂ ಸ್ಥಳೀಯ ಪ್ರವಾಸಿ ತಾಣಗಳ ಬಗ್ಗೆ ಮಾಹಿತಿ ಇರಬೇಕು ಎಂಬ ಉದ್ದೇಶದಿಂದ ಪ್ರತಿ ವಾರ ಅತ್ಯಂತ ಕಡಿಮೆ ದರದಲ್ಲಿ ಒಂದು ದಿನದ ಪ್ರವಾಸಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!
ಬಸ್ ಮಾಲೀಕರ ಸಂಘದ ಅಧ್ಯಕ್ಷ ರಂಗಪ್ಪ ಮಾತನಾಡಿ, ಕಡಿಮೆ ದರದಲ್ಲಿ ಉತ್ತಮ ಬಸ್ ಸೌಲಭ್ಯ ಒದಗಿಸಲು ಬಸ್ ಮಾಲೀಕರು ಬದ್ಧರಾಗಿದ್ದು, ಪ್ರಯಾಣಿಕರ ಸಂತೋಷವೇ ಪ್ರವಾಸೋದ್ಯಮದ ಪ್ರಗತಿಗೆ ಕಾರಣ ಎಂದು ಹೇಳಿದರು.
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಈ ಬಾರಿ ಅಂಜನಾಪುರ, ಶಿಕಾರಿಪುರ, ಬನವಾಸಿ, ಚಂದ್ರಗುತ್ತಿ ಸೇರಿದಂತೆ ಹಲವು ಐತಿಹಾಸಿಕ ಸ್ಥಳಗಳಿಗೆ ಪ್ರವಾಸವನ್ನು ಆಯೋಜಿಸಲಾಗಿತ್ತು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ. ವಿಜಯಕುಮಾರ್ ಮಾತನಾಡಿ, ಪ್ರವಾಸದಿಂದ ಜೀವನೋತ್ಸಾಹ ಹೆಚ್ಚುತ್ತದೆ. ಇದು ವೇದಿಕೆಯ ನಾಲ್ಕನೇ ಪ್ರವಾಸವಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದರು.
ಇದನ್ನು ಓದಿ: ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱
ಪ್ರವಾಸೋದ್ಯಮ ಅಭಿವೃದ್ಧಿಗೆ ಯೂತ್ ಹಾಸ್ಟೆಲ್ ಹಾಗೂ ಅಭಿವೃದ್ಧಿ ವೇದಿಕೆಯಿಂದ ನಿರಂತರ ಪ್ರವಾಸಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ವಾಗೇಶ್ ತಿಳಿಸಿದರು. ಈ ಪ್ರವಾಸದಲ್ಲಿ ಲಕ್ಷ್ಮೀ ರಾಜೇಶ್, ಮಹಾದೇವ ಸ್ವಾಮಿ ಸೇರಿದಂತೆ 50ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply