ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!

ಶಿವಮೊಗ್ಗ:  ಕರ್ನಾಟಕದ ಮಲೆನಾಡಿನ ಕಲಶಕ್ಕೆ ಮುಕುಟದ ಮಣಿಯಂತೆ ಪ್ರಜ್ವಲಿಸುತ್ತಿದ್ದ  ಶರಾವತಿ ನದಿ ಯ ಹಿನ್ನೀರಿಗೆ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತಹ ಐತಿಹಾಸಿಕ ಸಂಪರ್ಕ ಸೇತುವೆಯೊಂದು ಇಂದು ರಾಷ್ಟ್ರಕ್ಕೆ ಸಮರ್ಪಣೆಯಾಗಿದೆ! 

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ, 2.25 ಕಿ.ಮೀ. ಉದ್ದದ, ಸುಮಾರು ₹423.00 ಕೋಟಿ ಅನುದಾನದಲ್ಲಿ ಸಿದ್ಧಗೊಂಡಿರುವ ದೇಶದ ಎರಡನೇ ಅತಿ ದೊಡ್ಡ ಕೇಬಲ್ ಆಧಾರಿತ “ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು – ಕೊಲ್ಲೂರು” (ಸ್ಥಳೀಯವಾಗಿ ಹೊಳೆಬಾಗಿಲು ಸೇತುವೆ) ಸಂಪರ್ಕ ಸೇತುವೆಯನ್ನು ಇಂದು ಕೇಂದ್ರ ಭೂ ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿ ಅವರು, ಕೇಂದ್ರ ಆಹಾರ ನಾಗರಿಕ ಸರಬರಾಜು ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಸೇರಿ ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ನಿಜಕ್ಕೂ ಒಂದು ಭಾವನಾತ್ಮಕ ಕ್ಷಣ!

ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!

ದಶಕಗಳ ಹೋರಾಟದ ಫಲ:

ಸುಮಾರು ಆರು ದಶಕಗಳ ಕಾಲ ಹಿನ್ನೀರಿನ ಪ್ರದೇಶದ ಬಂಧುಗಳ ನಿರಂತರ ಹೋರಾಟದ ಕೂಗಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ, ₹423 ಕೋಟಿ ಅನುದಾನ ಬಿಡುಗಡೆಗೊಳಿಸಿತು. ಇದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಕನಸಿನ ಯೋಜನೆ, ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ನವರ ಸಂಕಲ್ಪದ ಫಲ ಮತ್ತು ಎಲ್ಲರ ನಿಸ್ವಾರ್ಥ ಪ್ರೀತಿ, ಆಶೀರ್ವಾದದ ಬಲದಿಂದ ಈ ಐತಿಹಾಸಿಕ ಘಟನೆಗೆ ನಮ್ಮ ಮಲೆನಾಡು ಸಾಕ್ಷಿಯಾಗಿದೆ ಎಂದರೆ ಅತಿಶಯೋಕ್ತಿ ಆಗಲಾರದು.

ಇದನ್ನು ಓದಿ : ಒಮ್ಮೆಯಾದರೂ ಭೇಟಿ ನೀಡಲೇಬೇಕಾದ 11 ಪವಿತ್ರ ಜ್ಯೋತಿರ್ಲಿಂಗಗಳು! ಆಧ್ಯಾತ್ಮಿಕ ಭಾರತ ದರ್ಶನ – ಶಿವಮೊಗ್ಗ ಎಕ್ಸ್‌ಪ್ರೆಸ್‌ನ್ಯೂಸ್ ವಿಶೇಷ ವರದಿ!

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಇದು ಕೇಂದ್ರ ಸರ್ಕಾರ ಅಧಿಕಾರ ನೀಡಿದ ಜನರ ಕೂಗಿಗೆ ತಕ್ಷಣವೇ ಸ್ಪಂದಿಸುವ ಮನೋಭಾವ ಇರುವ ಸರ್ಕಾರ ಎಂದು ಮತ್ತೊಮ್ಮೆ ದೇಶಕ್ಕೆ ಸಂದೇಶ ರವಾನಿಸಿದೆ. ಜೊತೆಗೆ ಶಂಕು ಸ್ಥಾಪನೆ ಮಾಡಿದ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ತನ್ನ ಅಧಿಕಾರದ ಅವಧಿಯಲ್ಲಿ ಉದ್ಘಾಟನೆ ಮಾಡುವ ಸಂಪ್ರದಾಯವನ್ನು ಮುಂದುವರೆಸಿ ಇತಿಹಾಸ ನಿರ್ಮಿಸುತ್ತಿದೆ.

ಇದನ್ನು ಓದಿ: ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಹೊಸ ಶಕೆಯ ಆರಂಭ:

ಈ ಸೇತುವೆ ಕೇವಲ ಶರಾವತಿ ಹಿನ್ನೀರಿನ ಸಂತ್ರಸ್ತರ ಬವಣೆಯನ್ನು ನೀಗಿಸುವುದಲ್ಲದೆ, ನಮ್ಮ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ನಡುವೆ ಇನ್ನಷ್ಟು ಬಾಂಧವ್ಯ ಬೆಸೆಯುವ ಕಾಲಘಟ್ಟಕ್ಕೆ ಮುನ್ನುಡಿ ಬರೆಯುವುದು ನಿಶ್ಚಿತ. ಜೊತೆಗೆ ಎರಡು ಜಿಲ್ಲೆಗಳ ಆರ್ಥಿಕ ಚಟುವಟಿಕೆಗಳು, ಪ್ರವಾಸೋದ್ಯಮ ಮತ್ತು ವೈವಿಧ್ಯಮಯ ಸಂಸ್ಕೃತಿಗಳ ಸಮ್ಮಿಲನ ಇನ್ನಷ್ಟು ಗಟ್ಟಿಯಾಗಲಿದೆ. ಇದು ಒಂದು ಹೊಸ ಶಖೆಯ ಆರಂಭಕ್ಕೆ ಸಾಕ್ಷಿಯಾಗಲಿದೆ.

ಇದನ್ನು ಓದಿ:  ನದಿಗೆ ತಳ್ಳಲ್ಪಟ್ಟರೂ ಬದುಕುಳಿದ ಪತಿ; ಪತ್ನಿಗೆ ವಿಚ್ಛೇದನ ನೀಡಲು ನಿರ್ಧಾರ! ಏನಿದು ವೈರಲ್ ಸುದ್ದಿ??🟢🟣

ಈ ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ಐತಿಹಾಸಿಕ ಸಂದರ್ಭದಲ್ಲಿ, ಈ ಸೇತುವೆ ಹೋರಾಟಕ್ಕೆ ದಶಕಗಳಿಂದ ಹೋರಾಟ ನಡೆಸುತ್ತಿದ್ದ ಶ್ರೀ ಪ್ರಸನ್ನ ಕೆರೆಕೈ ಅವರು ಸೇರಿದಂತೆ ಇನ್ನೂ ನೂರಾರು ಹೋರಾಟಗಾರರನ್ನು ನೆನಪಿಸಿಕೊಂಡು ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ.

ನಿಮ್ಮ ಅನಿಸಿಕೆಗಳನ್ನು ಕಮೆಂಟ್‌ಗಳಲ್ಲಿ ಹಂಚಿಕೊಳ್ಳಿ! 👇

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.