”ಪ್ಲಾಸ್ಟಿಕ್ ಸರ್ಜರಿ ಬಗ್ಗೆ ಭಯ ಬೇಡ, ಜೀವಕ್ಕೆ ಅಪಾಯವಿಲ್ಲ’: ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ!

ಶಿವಮೊಗ್ಗ: ‘ಪ್ಲಾಸ್ಟಿಕ್ ಸರ್ಜರಿ ಕೇವಲ ಸೌಂದರ್ಯ ವರ್ಧಕಕ್ಕೆ ಮಾತ್ರ ಸೀಮಿತವಲ್ಲ, ಇದು ಜೀವಕ್ಕೆ ಯಾವುದೇ ರೀತಿಯ ಅಪಾಯವನ್ನು ತರುವುದಿಲ್ಲ. ಈ ಬಗ್ಗೆ ಇರುವ ತಪ್ಪು ಕಲ್ಪನೆ, ಭಯ, ಆತಂಕ ಬೇಡ’ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞ ವೈದ್ಯರಾದ ಡಾ. ಚೇತನ್ ಕುಮಾರ್ ನವಿಲೇಹಾಳ್ ಅವರು ಜನರಿಗೆ ತಿಳಿಹೇಳಿದ್ದಾರೆ.

ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??

ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಅಂಗವಾಗಿ ಇಂದು ಶಿವಮೊಗ್ಗ ನಗರದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಡೀ ವಿಶ್ವದಲ್ಲಿ ಭಾರತದ ಪ್ಲಾಸ್ಟಿಕ್ ಸರ್ಜರಿಗೆ ವಿಶೇಷ ಇತಿಹಾಸವಿದೆ ಎಂದು ತಿಳಿಸಿದರು. 2500 ವರ್ಷಗಳ ಹಿಂದೆ ಆಧುನಿಕ ತಂತ್ರಜ್ಞಾನ ಇಲ್ಲದೆ ಸಂದರ್ಭದಲ್ಲಿಯೂ ಸುಶೃತ ಮಹರ್ಷಿಗಳು ಪ್ಲಾಸ್ಟಿಕ್ ಶಸ್ತ್ರಚಿಕಿತ್ಸೆಯನ್ನು ಮಾಡುತ್ತಿದ್ದರು. ಕತ್ತರಿಸಿ ಹೋದ ಮೂಗನ್ನು ರೋಗಿಯ ಹಣೆಯ ತ್ವಚೆಯಿಂದ ಪುನರ್ನಿರ್ಮಿಸುತ್ತಿದ್ದ ವಿಧಾನವು ಇಂದಿಗೂ ‘ಇಂಡಿಯನ್ ಫೋರ್‌ಹೆಡ್ ಫ್ಲಾಪ್’ ಎಂಬ ಹೆಸರಿನಲ್ಲಿ ಜಗತ್ತಿನಾದ್ಯಂತ ಉಪಯೋಗದಲ್ಲಿದೆ ಎಂದು ಮಾಹಿತಿ ನೀಡಿದರು. ಪ್ಲಾಸ್ಟಿಕ್ ಸರ್ಜರಿಗೆ ಯಾವುದೇ ವಯೋಮಿತಿ ಅಥವಾ ಲಿಂಗಬೇಧವಿಲ್ಲ ಎಂದು ಡಾ. ಚೇತನ್ ಸ್ಪಷ್ಟಪಡಿಸಿದರು.

 

 

ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!

‘ವೈದ್ಯರು ದೈವೀ ಸ್ವರೂಪಿಗಳು’: ಡಾ. ಧನಂಜಯ ಸರ್ಜಿ

ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಜಿ ಸಮೂಹ ಸಂಸ್ಥೆಗಳ ಪ್ರೊಪ್ರೈಟರ್ ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು, “ಅಪಘಾತದಂತಹ ಸನ್ನಿವೇಶಗಳಲ್ಲಿ ನೋವನ್ನು ನುಂಗಿ ಚಿಕಿತ್ಸೆಯಿಂದ ಗುಣಮುಖರಾಗಿ ಬಂದಿರುವ ರೋಗಿಗಳ ಮುಖದಲ್ಲಿನ ಮಂದಹಾಸ ನಮ್ಮಲ್ಲಿ ಧನ್ಯತೆಯ ಭಾವ ಮೂಡಿಸುತ್ತದೆ. ಭಗವಂತ ಜನ್ಮ ಕೊಟ್ಟರೆ ಅದಕ್ಕೆ ಮರುಜನ್ಮ ಕೊಡುವಂತಹ ಶಕ್ತಿ ಇದೆ ಅಂದರೆ ಅದು ಕೇವಲ ದೈವೀ ಸ್ವರೂಪಿ ವೈದ್ಯರಿಗೆ ಮಾತ್ರ” ಎಂದು ವೈದ್ಯಕೀಯ ವೃತ್ತಿಯ ಮಹತ್ವವನ್ನು ಬಣ್ಣಿಸಿದರು. ರೋಗಿಗಳ ಸೇವೆಯಲ್ಲಿ ತಾವು ನೆಮ್ಮದಿ ಕಂಡುಕೊಂಡಿರುವುದಾಗಿ ಅವರು ತಿಳಿಸಿದರು.

ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!

ಜಾಹಿರಾತು:

ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!

ಪ್ಲಾಸ್ಟಿಕ್ ಸರ್ಜರಿಯ ಎರಡು ವಿಧಗಳು:

ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ವಾದಿರಾಜ್ ಕುಲಕರ್ಣಿ ಮಾತನಾಡಿ, ಪ್ಲಾಸ್ಟಿಕ್ ಸರ್ಜರಿಯಲ್ಲಿ ಎರಡು ವಿಧಗಳಿವೆ – ಒಂದು ಸೌಂದರ್ಯ ವರ್ಧಕ ಶಸ್ತ್ರಚಿಕಿತ್ಸೆ ಮತ್ತು ಇನ್ನೊಂದು ಅಪಘಾತ ಅಥವಾ ವೈಕಲ್ಯದಿಂದ ಉಂಟಾದ ಹಾನಿಯನ್ನು ಸರಿಪಡಿಸುವ ಶಸ್ತ್ರಚಿಕಿತ್ಸೆ. ಊನವಾದ ಅಂಗಗಳನ್ನು ಮೊದಲಿನಂತೆ ಸರಿಪಡಿಸುವುದು, ಬೇರೆ ವಿಧಾನಗಳಿಂದ ಅವುಗಳನ್ನು ಮತ್ತೆ ನಿರ್ಮಿಸುವುದು, ವಕ್ರವಾಗಿ ಬೆಳೆದಿರುವ ಅಂಗಗಳನ್ನು ಚಂದವಾಗಿ ಕಾಣುವಂತೆ ಸರಿಪಡಿಸುವುದು ರೋಗಿಗಳ ಪಾಲಿಗೆ ವರದಾನವಾಗಿದೆ ಎಂದು ಹೇಳಿದರು.

ಇದನ್ನು ಓದಿ: ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱

ವಿರೂಪಕ್ಕೆ ದೃತಿಗೆಡಬೇಡಿ’: ಡಾ. ಪ್ರಶಾಂತ್ ವೀರಯ್ಯ

ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪ್ರಶಾಂತ್ ವೀರಯ್ಯ ಮಾತನಾಡಿ, “ನಾವೆಲ್ಲರೂ ಭಗವಂತನ ಸೃಷ್ಟಿ. ಹುಟ್ಟುತ್ತಲೇ ಕೆಲವರಿಗೆ ವಿರೂಪ ಆಗಬಹುದು ಅಥವಾ ಆಕಸ್ಮಿಕ ಘಟನೆ, ಅಪಘಾತಗಳಿಂದಲೂ ಆಗುವ ಸಾಧ್ಯತೆ ಇರುತ್ತದೆ. ಇಂತಹ ಸಮಯದಲ್ಲಿ ದೃತಿಗೆಡಬಾರದು. ಇದಕ್ಕೂ ಇದೀಗ ಪ್ಲಾಸ್ಟಿಕ್ ಸರ್ಜರಿಯ ಮೂಲಕ ಚಿಕಿತ್ಸೆಗಳಿವೆ, ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಸಲಹೆ ನೀಡಿದರು.

ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!

ಇದನ್ನು ಓದಿ:  ನದಿಗೆ ತಳ್ಳಲ್ಪಟ್ಟರೂ ಬದುಕುಳಿದ ಪತಿ; ಪತ್ನಿಗೆ ವಿಚ್ಛೇದನ ನೀಡಲು ನಿರ್ಧಾರ! ಏನಿದು ವೈರಲ್ ಸುದ್ದಿ??🟢🟣

ಈ ಸಂದರ್ಭದಲ್ಲಿ ರೋಗಿಗಳಿಗೆ ಆರೋಗ್ಯ ಕಿಟ್‌ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಸರ್ಜಿ ಸಮೂಹ ಸಂಸ್ಥೆಯ ನಿರ್ದೇಶಕಿ ನಮಿತಾ ಧನಂಜಯ ಸರ್ಜಿ, ನಾಗವೇಣಿ ಸರ್ಜಿ, ಆಡಳಿತಾಧಿಕಾರಿಗಳಾದ ಮುರುಳಿಧರ್ ರಾವ್ ಕುಲಕರ್ಣಿ, ಡಾ. ವಿಜಯ್ ಕುಮಾರ ಮಾಯೆರ್, ಸಹಾಯಕ ಆಡಳಿತಾಧಿಕಾರಿಗಳಾದ ಸಚಿನ್ ಕುಮಾರ್, ಡಾ. ಮಂಜುನಾಥ್, ಡಾ. ಚೇತನ್ ಸಾಗರ್ ಸೇರಿದಂತೆ ಅನೇಕ ವೈದ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನು ಓದಿ: ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!

ಹೆಚ್ಚಿನ ಮಾಹಿತಿ ಹಾಗೂ ಕ್ಷಣ ಕ್ಷಣದ ಶಿವಮೊಗ್ಗ ಸುದ್ದಿಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ.

ಜಾಹಿರಾತು:

ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207


Leave a Reply

Your email address will not be published.