ಶಿವಮೊಗ್ಗ: ಇಂದು ಸಂಜೆ ಆನಂದಪುರ ಸಮೀಪದ ಮುಂಬಾಳುವಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆರೆ ಏರಿ ಮೇಲೆ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಶರತ್ ಮತ್ತು ಭರತ್ ಎಂಬುವವರಿಗೆ ಗಾಯಗಳಾಗಿವೆ.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
ಸಾಗರದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಪ್ರಕಾಶ್ ಬಸ್ ಮತ್ತು ಆನಂದಪುರ ಕಡೆಯಿಂದ ಸಾಗರಕ್ಕೆ ಹೊರಟಿದ್ದ ಕಾರುಗಳ ನಡುವೆ ಈ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕೆರೆಯ ತಡೆಗೋಡೆ ಮೇಲೆ ನಿಂತಿದೆ. ಬಸ್‌ನ ಮುಂಭಾಗಕ್ಕೂ ಹಾನಿಯಾಗಿದೆ.
ಇದನ್ನು ಓದಿ: ಭಯಾನಕ ಅಂತ್ಯ: ಶಿವಮೊಗ್ಗ ಎಣ್ಣೆ ಪಾರ್ಟಿಯಲ್ಲಿ ಸ್ನೇಹಿತನಿಂದಲೇ ಸ್ನೇಹಿತನ ಕೊಲೆ! ಬೊಮ್ಮನಕಟ್ಟೆಯಲ್ಲಿ ಮತ್ತೊಂದು ಮರ್ಡರ್ !!
‘ಕಾರಿನಲ್ಲಿದ್ದ ಭರತ್ ಮತ್ತು ಶರತ್ ಕುಮಾರ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್‌ನಲ್ಲಿದ್ದ ಮಹಿಳೆಯೊಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಆನಂದಪುರದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ.
ಇದನ್ನು ಓದಿ : ಸಿಗಂದೂರು ಲಾಂಚ್‌ಗಳು ಇನ್ನು ಬೋಟ್ ಹೋಟೆಲ್‌ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಘಟನಾ ಸ್ಥಳಕ್ಕೆ ಆನಂದಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನು ಓದಿ: ಶಾಕಿಂಗ್: ₹2 ಲಕ್ಷ ಸಾಲಕ್ಕೆ, ಹೆಂಡತಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪತಿ! 😱
ಇದನ್ನು ಓದಿ: ಕ್ರೆಡಿಟ್ ಕಾರ್ಡ್‌ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಇದನ್ನು ಓದಿ: ನದಿಗೆ ತಳ್ಳಲ್ಪಟ್ಟರೂ ಬದುಕುಳಿದ ಪತಿ; ಪತ್ನಿಗೆ ವಿಚ್ಛೇದನ ನೀಡಲು ನಿರ್ಧಾರ! ಏನಿದು ವೈರಲ್ ಸುದ್ದಿ??🟢🟣
ಇದನ್ನು ಓದಿ: ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!
ಹೆಚ್ಚಿನ ಮಾಹಿತಿ ಹಾಗೂ ಕ್ಷಣ ಕ್ಷಣದ ಶಿವಮೊಗ್ಗ ಸುದ್ದಿಗಳಿಗಾಗಿ ಶಿವಮೊಗ್ಗ ಎಕ್ಸ್‌ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ.
ವರದಿ : ಬಿ ಡಿ ರವಿಕುಮಾರ್ ಸಾಗರ
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply