ಶಿವಮೊಗ್ಗ: ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ರಸ್ತೆ ಅಪಘಾತಗಳನ್ನು ತಡೆಯುವಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಜನರಿಗೆ ಕರೆ ನೀಡಿದ್ದಾರೆ. ನಗರದ ಉಷಾ ನರ್ಸಿಂಗ್ ಹೋಮ್ ಬಳಿಯ ಅಕ್ಕಮಹಾದೇವಿ ವೃತ್ತದಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು??
“ಜೀವಕ್ಕಿಂತ ಅಮೂಲ್ಯವಾದ ವಸ್ತು ಇನ್ನೊಂದಿಲ್ಲ. ರಸ್ತೆ ಅಪಘಾತಗಳಿಂದ ಸಾಕಷ್ಟು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವೇಗದ ಚಾಲನೆ, ಹೆಲ್ಮೆಟ್ ಧರಿಸದಿರುವುದು, ಸೀಟ್ ಬೆಲ್ಟ್ ಹಾಕದೆ ಇರುವುದು ಮತ್ತು ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಅಪಘಾತಗಳ ಪ್ರಮಾಣವನ್ನು ಹೆಚ್ಚಿಸುತ್ತಿದೆ” ಎಂದು ಎಸ್ಪಿ ಮಿಥುನ್ ಕುಮಾರ್ ಕಳವಳ ವ್ಯಕ್ತಪಡಿಸಿದರು. ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಒತ್ತಿ ಹೇಳಿದರು.
ಇದನ್ನು ಓದಿ: ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!
ಇದನ್ನು ಓದಿ : ಸಿಗಂದೂರು ಲಾಂಚ್ಗಳು ಇನ್ನು ಬೋಟ್ ಹೋಟೆಲ್ಗಳು! ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು!
ಜಾಹಿರಾತು:
ಇದನ್ನು ಓದಿ: ಮಹಿಳೆಯರೇ ಎಚ್ಚರ! ಗರ್ಭಕಂಠದ ಕ್ಯಾನ್ಸರ್ ಬಗ್ಗೆ ನಿಮಗೆಷ್ಟು ಗೊತ್ತು? ಈ ಲಕ್ಷಣಗಳಿದ್ದರೆ ನಿರ್ಲಕ್ಷಿಸಬೇಡಿ!
ಪೊಲೀಸ್ ಇಲಾಖೆಗೆ ಶ್ಲಾಘನೆ:
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಕಾರ್ಪೊರೇಟರ್ ಯೋಗೇಶ್, ಪೊಲೀಸ್ ಇಲಾಖೆ ಸಿಬ್ಬಂದಿಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಂಪೂರ್ಣ ಬೆಂಬಲ ನೀಡಿದ್ದು, ಇದರಿಂದ ಬಹಳ ಉತ್ತಮವಾದ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆಯನ್ನು ಶ್ಲಾಘಿಸಿದರು. ನಾಗರಿಕರ ಪರವಾಗಿ ಬಳ್ಳೇಕೆರೆ ಸಂತೋಷ್ ಅವರು ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸಂಚಾರಿ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು.
ಇದನ್ನು ಓದಿ: ದೇಶಕ್ಕೆ ಮತ್ತೆ ತುರ್ತು ಪರಿಸ್ಥಿತಿ ಬರುವುದಿಲ್ಲ: ಬಿ.ಎಲ್.ಸಂತೋಷ್ ಭರವಸೆ
ಇದನ್ನು ಓದಿ: ಕ್ರೆಡಿಟ್ ಕಾರ್ಡ್ನ ಕೈ ಹಿಡಿಯುವ ಮುನ್ನ… ಲಾಭ-ನಷ್ಟದ ಲೆಕ್ಕಾಚಾರ ಇಲ್ಲಿದೆ!
ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್, ಸಂಚಾರಿ ವೃತ್ತ ನಿರೀಕ್ಷಕರಾದ ದೇವರಾಜ್, ತಿರುಮಲೇಶ್, ನವೀನ್ ಮಠಪತಿ, ಪತ್ರಕರ್ತರ ಸಂಘದ ಕಾರ್ಯದರ್ಶಿ ಕೆ.ಆರ್. ಸೋಮನಾಥ್, ದಿನೇಶ್ ಶೆಟ್, ರಾಜೇಂದ್ರ, ಹರೀಶ್, ಗಿರಿರಾಜ್, ಗೋಪಾಲ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದನ್ನು ಓದಿ: ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!
ರಸ್ತೆ ಸುರಕ್ಷತೆಯ ಬಗ್ಗೆ ನಿಮ್ಮ ಅಭಿಪ್ರಾಯಗಳೇನು? ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಯಾವ ಕ್ರಮಗಳನ್ನು ತೆಗೆದುಕೊಳ್ಳಬಹುದು? ಕಾಮೆಂಟ್ಗಳಲ್ಲಿ ನಿಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳಿ.
ಇದನ್ನು ಓದಿ: ಶರಾವತಿ ಮುಕುಟಕ್ಕೆ ಹೊಸ ಸೇತುವೆ ಸೊಬಗು: ಸಿಗಂಧೂರು ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ – ಆರು ದಶಕಗಳ ಹೋರಾಟಕ್ಕೆ ಮುಕ್ತಿ!
ಹೆಚ್ಚಿನ ಮಾಹಿತಿ ಹಾಗೂ ಕ್ಷಣ ಕ್ಷಣದ ಶಿವಮೊಗ್ಗ ಸುದ್ದಿಗಳಿಗಾಗಿ ಶಿವಮೊಗ್ಗ ಎಕ್ಸ್ಪ್ರೆಸ್ ನ್ಯೂಸ್ ವೀಕ್ಷಿಸುತ್ತಿರಿ.
ಜಾಹಿರಾತು:
ಸುದ್ದಿ ಮತ್ತು ಜಾಹಿರಾತಿಗಾಗಿ ಈ ನಂಬರ್ ಸಂಪರ್ಕಿಸಿ : 7795829207
Leave a Reply